ADVERTISEMENT

ಕೊಡಿಗೇಹಳ್ಳಿ ಗ್ರಾ.ಪಂ. ಶೀಘ್ರ ಬಿಬಿಎಂಪಿ ವ್ಯಾಪ್ತಿಗೆ: ಎಸ್.ಟಿ. ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 20:26 IST
Last Updated 1 ಜನವರಿ 2021, 20:26 IST
ಗ್ರಾಮ ಪಂಚಾಯಿತಿ ನೂತನ ಸದಸ್ಯರನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಭಿನಂದಿಸಿದರು.
ಗ್ರಾಮ ಪಂಚಾಯಿತಿ ನೂತನ ಸದಸ್ಯರನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಭಿನಂದಿಸಿದರು.   

ರಾಜರಾಜೇಶ್ವರಿನಗರ: ಕೊಡಿಗೇಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗುವುದು ಖಚಿತ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಕೊಡಿಗೇಹಳ್ಳಿಯಲ್ಲಿ ಕೊಡಿಗೇಹಳ್ಳಿ ಗ್ರಾಮಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಗ್ರಾಮಪಂಚಾಯತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ’ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವ್ಯಾಪ್ತಿಗೆ ಬರುವ ಎಲ್ಲ ಹಳ್ಳಿಗಳನ್ನು ಬಿಡಿಎ ವತಿಯಿಂದ ಸಮಗ್ರ ಅಭಿವೃದ್ಧಿ ಮಾಡಲಾಗುವುದು‘ ಎಂದರು.

ಮಾಗಡಿ ಮುಖ್ಯರಸ್ತೆಯಿಂದ ಕೊಡಿಗೇಹಳ್ಳಿ ಮೂಲಕ ಹೊಸಹಳ್ಳಿವರೆಗೆ ₹7ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿದೆ. ಜೊತೆಗೆ ₹3 ಕೋಟಿ ವೆಚ್ಚದಲ್ಲಿಯೂ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾ ಗುವುದು. ಬಿಡಿಎ ಮತ್ತು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.

ADVERTISEMENT

ಗ್ರಾಮಪಂಚಾಯತಿ ಸದಸ್ಯರಭಿನಂದನಾ ಸಮಾರಂಭದಲ್ಲಿ ಬಿಜೆಪಿ ಮುಖಂಡ ಡಾ.ಎನ್.ನಂಜುಂಡೇಶ್, ಎಂ.ನಾಗರಾಜು, ಪಾಲಿಕೆ ಮಾಜಿ ಸದಸ್ಯ ರಾಜಣ್ಣ, ಪುಷ್ಪಲತಾ ಪುಟ್ಟರಾಜು, ಕನ್ನಲ್ಲಿ ಪುರುಷೋತ್ತಮ್, ಭಾಗ್ಯಮ್ಮ ಮುನಿಯಪ್ಪ, ಸಾಕಮ್ಮ, ಕೋಮಲ, ಸಿದ್ದಲಿಂಗಸ್ವಾಮಿ, ನಾಗರಾಜ್ ಎನ್, ಕುಮಾರಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.