ADVERTISEMENT

ವಿದ್ಯಾರ್ಥಿನಿ ಕೊಲೆ: ಮೋಂಬತ್ತಿ ಹಿಡಿದು ಪ್ರತಿಭಟಿಸಿದ ವೈದ್ಯರು, ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 23:30 IST
Last Updated 16 ಆಗಸ್ಟ್ 2024, 23:30 IST
ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ನಿಮಾನ್ಸ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ನಿಮ್ಹಾನ್ಸ್‌ನ ನ್ಯೂರೋ ಕೇಂದ್ರದ ಬಳಿ ಶುಕ್ರವಾರ ಸಂಜೆ ಮೋಂಬತ್ತಿ ಬೆಳಗಿ ಮೌನ ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ
ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ನಿಮಾನ್ಸ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ನಿಮ್ಹಾನ್ಸ್‌ನ ನ್ಯೂರೋ ಕೇಂದ್ರದ ಬಳಿ ಶುಕ್ರವಾರ ಸಂಜೆ ಮೋಂಬತ್ತಿ ಬೆಳಗಿ ಮೌನ ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ಕೋಲ್ಕತ್ತದ ಆರ್‌.ಜಿ. ಕರ್‌ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವುದನ್ನು ವಿರೋಧಿಸಿ ನಗರದ ವಿವಿಧೆಡೆ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಶುಕ್ರವಾರ ಸಂಜೆ ಉರಿಯುವ ಮೋಂಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿದರು.

ನಿಮ್ಹಾನ್ಸ್‌ ಆವರಣದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಂದಿ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಮೋಂಬತ್ತಿ ಹಿಡಿದು ಸಾಗಿದರು. ನಿಮ್ಹಾನ್ಸ್‌ನ ನ್ಯೂರೋ ಕೇಂದ್ರದಿಂದ ಆರಂಭವಾದ ಮೆರವಣಿಗೆಯಲ್ಲಿ ಬೆಳಗುವ ಮೋಂಬತ್ತಿ ಹಿಡಿದು ಮೌನವಾಗಿ ಸಾಗಿದರು. ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಶಿವಾಜಿನಗರದ ಅಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೌರಿಂಗ್‌ ಆಸ್ಪತ್ರೆಯ ವೈದ್ಯರು ಕೂಡ ಪ್ರತಿಭಟನೆ ನಡೆಸಿದರು. ಎಸ್‌.ಜಿ. ಬಾಳೇಕುಂದ್ರಿ ವೃತ್ತದಿಂದ ಬೌರಿಂಗ್‌ ಆಸ್ಪತ್ರೆಯವರೆಗೂ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಕಾರರು, ವೈದ್ಯ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿ, ಕೊಲೆ ಮಾಡಿದವರನ್ನು ಶಿಕ್ಷಿಸುವಂತೆ ಆಗ್ರಹಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.