ADVERTISEMENT

3 ದಿನ ‘ಕೈ’ ರಾಜ್ಯ ನಾಯಕರ ಸಭೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2018, 19:05 IST
Last Updated 15 ನವೆಂಬರ್ 2018, 19:05 IST

ಬೆಂಗಳೂರು: ಪಕ್ಷಕ್ಕೆ ದೇಣಿಗೆ ಸಂಗ್ರಹಿಸುವ ‘ಜನ ಸಂಪರ್ಕ’ ಮತ್ತು ಸದಸ್ಯತ್ವ ನೋಂದಣಿ ‘ಶಕ್ತಿ’ ಯೋಜನೆಗಳು ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಬಗ್ಗೆ ಕಾಂಗ್ರೆಸ್‌ ವರಿಷ್ಠರು ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಎರಡೂ ಕಾರ್ಯಕ್ರಮಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಇದರಿಂದ ಪಕ್ಷಕ್ಕೆ ನಿಧಿ ಸಂಗ್ರಹಿಸುವ ಮತ್ತು ಸಂಘಟನಾ ಚಟುವಟಿಕೆ ಮೇಲೆ ಪರಿಣಾಮ ಉಂಟಾಗಿದೆ. ತಕ್ಷಣ ಈ ನಿಟ್ಟಿನಲ್ಲಿ ಗಮನಹರಿಸುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ, ಈವರೆಗಿನ ಚಟುವಟಿಕೆಯ ಪ್ರಗತಿ ಪರಿಶೀಲನೆಗೆ ಪಕ್ಷದ ವಿಭಾಗ ಮಟ್ಟದ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಇದೇ 16, 17 ಮತ್ತು 20ರಂದು ಕರೆದಿದ್ದಾರೆ. ಜೊತೆಗೆ ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆ, ರಾಜಕೀಯ ಸ್ಥಿತಿಗತಿ, ಮತದಾರರ ಒಲವು ನಿಲುವುಗಳ ಬಗ್ಗೆಯೂ ಚರ್ಚೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.