ADVERTISEMENT

ಬೆಂಗಳೂರು | ಶಾಸಕರಿಗೆ ಕೊರೊನಾ ಹಿನ್ನೆಲೆ ಕೆಪಿಸಿಸಿ ಕಚೇರಿ ಸೀಲ್‌ಡೌನ್‌

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 9:57 IST
Last Updated 11 ಜುಲೈ 2020, 9:57 IST
ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ
ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ   

ಬೆಂಗಳೂರು: ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಓಡಾಡಿದ ಶಾಸಕರಿಗೆ ಮತ್ತು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಚೇರಿಯನ್ನು ಬಿಬಿಎಂಪಿ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.

ಕೆಪಿಸಿಸಿಯ ಹಳೆ ಮತ್ತು ಹೊಸ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಧಿಕಾರಿಗಳು ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಿದ್ದಾರೆ.

ಕಾಂಗ್ರೆಸ್‌ನ ಐವರು ಶಾಸಕರಿಗೆ ಈಗಾಗಲೇ ಸೋಂಕು ದೃಢಪಟ್ಟಿದೆ. ಅಲ್ಲದೆ, ಕೆಪಿಸಿಸಿ ಕಚೇರಿಯ ನಾಲ್ವರು ಸಿಬ್ಬಂದಿಗೂ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.