ADVERTISEMENT

ಡಿ.ಕೆ.ಶಿವಕುಮಾರ್ ‘ಪದಗ್ರಹಣ’ ಮುಂದೂಡಿಕೆ

ಕೆಪಿಸಿಸಿ ನಿಯೋಜಿತ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 21:46 IST
Last Updated 1 ಜೂನ್ 2020, 21:46 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಇದೇ 8ರವರೆಗೆ ಯಾವುದೇ ರಾಜಕೀಯ ಸಭೆಗಳನ್ನು ನಡೆಸಲು ಅವಕಾಶ ಇಲ್ಲ. ಹೀಗಾಗಿ, ಇದೇ 7ರಂದು ನಡೆಸಲು ಉದ್ದೇಶಿಸಿದ್ದ ಪದಗ್ರಹಣ ಕಾರ್ಯಕ್ರಮ ಮುಂದೂಡಲಾಗಿದೆ’ ಎಂದು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

‘7ರಂದು ಕಾರ್ಯಕ್ರಮ ನಡೆಸಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಮತ್ತು ಪೊಲೀಸ್ ಕಮಿಷನರ್‌ಗೆ ಮನವಿ ಮಾಡಿದ್ದೆವು. ಹೊಸ ಮಾರ್ಗಸೂಚಿ ಹೊರಡಿಸಿರುವುದರ ಹಿಂದೆ ರಾಜಕೀಯ ಹುನ್ನಾರವಿದೆ’ ಎಂದೂ ದೂರಿದರು.

‘ಬೆಂಗಳೂರಿನಲ್ಲಿ 150 ಮಂದಿ ಸೇರಿ ಕಾರ್ಯಕ್ರಮ ಮಾಡುತ್ತೇವೆ. ಉಳಿದಂತೆ, ಎಲ್ಲ ಗ್ರಾಮ ಪಂಚಾಯಿತಿಗಳು ಮತ್ತು ವಾರ್ಡ್‌ಗಳು ಸೇರಿ ಸುಮಾರು 7,800 ಕಡೆಗಳಲ್ಲಿ ಏಕಕಾಲದಲ್ಲಿ ‘ವಂದೇ ಮಾತರಂ’ ಗೀತೆಯಿಂದ ಆರಂಭಿಸಿ ಸಂವಿಧಾನದ ಪೀಠಿಕೆ ವಾಚನದೊಂದಿಗೆ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದು’ ಎಂದರು.

ADVERTISEMENT

‘ಜೂಮ್ ಮೂಲಕವೂ ವೀಕ್ಷಿಸಬಹುದು. ಕಾಂಗ್ರೆಸ್ ಕಾರ್ಯಕರ್ತರು, ಹಿತೈಷಿಗಳು ಮನೆಯಲ್ಲೇ ಕುಳಿತು ಮಿಸ್ಡ್‌ ಕಾಲ್ (7676366666) ನೀಡುವ ಮೂಲಕ ಭಾಗವಹಿಸಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.