ADVERTISEMENT

ಕೆಪಿಎಸ್‌ಸಿ ಅಕ್ರಮ: ತನಿಖೆಗೆ ಅಭ್ಯರ್ಥಿಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 22:10 IST
Last Updated 20 ಜನವರಿ 2020, 22:10 IST
ಕೆಪಿಎಸ್‌ಸಿ
ಕೆಪಿಎಸ್‌ಸಿ   

ಬೆಂಗಳೂರು: ಕೆಪಿಎಸ್‌ಸಿ 2015ರಲ್ಲಿ ನಡೆಸಿದ ಗೆಜೆಟೆಡ್‌ ಪ್ರೊಬೇಷನರಿ ಮುಖ್ಯ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಹಾರಗಳನ್ನು ನ್ಯಾಯಾಂಗ ತನಿಖೆ ಹಾಗೂ ಸಿಬಿಐ ತನಿಖೆಗೆ ಒಳಪಡಿಸುವಂತೆಕೆಎಎಸ್‌ ನೊಂದ ಅಭ್ಯರ್ಥಿಗಳ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಶಿವರಾಮು, ‘ಕೆಪಿಎಸ್‌ಸಿ ಲೂಟಿಕೋರರ ತಾಣವಾಗಿ ಮಾರ್ಪ
ಟ್ಟಿದೆ. ನಿಯಮಾವಳಿಗಳನ್ನು ಗಾಳಿಗೆ ತೂರಿ ಆಯ್ಕೆ ಪಟ್ಟಿಯನ್ನು ಮನಬಂದಂತೆ ಪ್ರಕಟಿಸಿದ್ದು, ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದೆ’ ಎಂದು ದೂರಿದರು.

ನೊಂದ ಅಭ್ಯರ್ಥಿ ಆಯೇಷಾ,‘2017ರಲ್ಲಿ ನಡೆದ ಮುಖ್ಯ ಪರೀಕ್ಷೆಯ ತಾತ್ಕಾಲಿಕ ಪಟ್ಟಿಯನ್ನು ಎರಡೂವರೆ ವರ್ಷಗಳ ಬಳಿಕ ಪ್ರಕಟಿಸಿತು. ಆದರೆ, ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನವಷ್ಟೇ ಕಾಲಾವಕಾಶ ನೀಡಿತು. ಅದರಲ್ಲಿ ಮೂರು ದಿನ ಕೋರ್ಟ್‌ ಹಾಗೂಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ರಜೆ ಇತ್ತು. ಆಯೋಗ ಪೂರ್ವನಿಯೋಜಿತವಾಗಿ ಆಯ್ಕೆ ಪಟ್ಟಿ ಪ್ರಕಟಿಸಿತು’ ಎಂದರು.

ADVERTISEMENT

‘ಆಯೋಗದಲ್ಲಿ ನಡೆದಿರುವ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ನಡೆಯಬೇಕು. ಇಲ್ಲದಿದ್ದರೆ ಅಭ್ಯರ್ಥಿಗಳೆಲ್ಲ ಪ್ರತಿಭಟನೆ ನಡೆಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.