ADVERTISEMENT

ಕೆಪಿಎಸ್‌ಸಿ ನೇಮಕಾತಿ ವಿಳಂಬ ಖಂಡಿಸಿ ಉಪವಾಸ

​ಪ್ರಜಾವಾಣಿ ವಾರ್ತೆ
Published 1 ಜುಲೈ 2019, 19:09 IST
Last Updated 1 ಜುಲೈ 2019, 19:09 IST
ಸುರೇಶ್‌ ಕುಮಾರ್‌
ಸುರೇಶ್‌ ಕುಮಾರ್‌   

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಳಂಬ ಪ್ರತಿಭಟಿಸಿ ಜುಲೈ 3ರಂದು ಆಯೋಗದ ಕಚೇರಿ ಮುಂಭಾಗ ಶಾಸಕ ಸುರೇಶ್‌ ಕುಮಾರ್‌ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

‘2015ರ ಗೆಜೆಟೆಡ್‌ ಪ್ರೊಬೆಷನರ್ಸ್‌ ಪರೀಕ್ಷೆಗೆ ಸಂಬಂಧಿಸಿ ಕೂಡಲೇ ಸಂದರ್ಶನ ದಿನಾಂಕ ಪ್ರಕಟಿಸಬೇಕು ಎಂಬ ಆಗ್ರಹದೊಂದಿಗೆ ಬೆಳಿಗ್ಗೆ 8ರಿಂದ ಉಪವಾಸ ಸತ್ಯಾಗ್ರಹ ನಡೆಸಲಿದ್ದೇನೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘10 ವರ್ಷಗಳಲ್ಲಿ ಕೆಪಿಎಸ್‌ಸಿ ವತಿಯಿಂದ ಮೂರು ಬ್ಯಾಚ್‌ಗಳ ಫಲಿತಾಂಶ ಮಾತ್ರ ಪ್ರಕಟವಾಗಿದೆ. ರಾಜ್ಯದ ಆಡಳಿತ ಯಂತ್ರಕ್ಕೆ ಸೂಕ್ತ ವ್ಯಕ್ತಿಗಳನ್ನು ಒದಗಿಸುವ ಜವಾಬ್ದಾರಿ ಹೊಂದಿರುವ ಆಯೋಗದ ಕಾರ್ಯವೈಖರಿ ಅತ್ಯಂತ ನಿರಾಶಾದಾಯಕವಾಗಿದೆ’ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.