ADVERTISEMENT

ಕೆಪಿಟಿಸಿಎಲ್: ಎ.ಇ ಹುದ್ದೆ ಬಡ್ತಿ ಪ್ರಕಟಣೆಗೆ ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 16 ಮೇ 2022, 19:56 IST
Last Updated 16 ಮೇ 2022, 19:56 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (ಕೆಪಿಟಿಸಿಎಲ್) ಸಹಾಯಕ ಎಂಜಿನಿ
ಯರ್ ಹುದ್ದೆಗೆ ಬಡ್ತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೆ ಹೈಕೋರ್ಟ್ ತಾತ್ಕಾಲಿಕ ನಿರ್ಬಂಧ ವಿಧಿಸಿದೆ.

ಸಹಾಯಕ ಹುದ್ದೆಯ ಬಡ್ತಿಗೆ ಕೆಪಿಟಿಸಿಎಲ್ ಪ್ರಕಟಿಸಿದ್ದ ಜ್ಯೇಷ್ಠತಾ ಪಟ್ಟಿಪ್ರಶ್ನಿಸಿ ಕೆಪಿಟಿಸಿಎಲ್ ಹೆಚ್ಚುವರಿ ಸಹಾಯಕ ಎಂಜಿನಿಯರ್ ಬಿ.ಸುಮಾ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ವಿಲೇವಾರಿ ಮಾಡಿದೆ.

‘ಸಂಭಾವ್ಯ ಜ್ಯೇಷ್ಠತಾ ಪಟ್ಟಿಗೆ ಅರ್ಜಿದಾರರು ಸಲ್ಲಿಸಿರುವ ಆಕ್ಷೇಪಣೆಯನ್ನು ಪರಿಗಣಿಸಬೇಕು. ನಂತರ ಅರ್ಜಿದಾರರು ಹೈದರಾಬಾದ್ ಕರ್ನಾಟಕ ಪ್ರದೇಶದ ಮೀಸಲು ಕೋಟಾದಡಿ ಸಹಾಯಕ ಎಂಜಿನಿಯರ್ ಹುದ್ದೆ ಬಡ್ತಿ ಪಡೆಯಲು ಅರ್ಹರಾಗಿದ್ದಾರೋ ಅಥವಾ ಇಲ್ಲವೋ ಎಂಬ ಬಗ್ಗೆ ಪರಿಶೀಲಿಸಿ ನಾಲ್ಕು ವಾರಗಳಲ್ಲಿ ಸೂಕ್ತ ಅದೇಶ ಹೊರಡಿಸಬೇಕು. ಅಲ್ಲಿಯವರಿಗೆ ಸಹಾಯಕ ಎಂಜಿನಿಯರ್ ಹುದ್ದೆಗೆ ಬಡ್ತಿಯ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಬಾರದು’ ಎಂದು ನ್ಯಾಯಪೀಠ ಕೆಪಿಟಿಸಿಎಲ್‌ಗೆ ನಿರ್ದೇಶಿಸಿದೆ.

ADVERTISEMENT

‘ಹೈದರಾಬಾದ್ ಕರ್ನಾಟಕ ಪ್ರದೇಶದ ಮೀಸಲು ಕೋಟಾದಡಿ ನಾನುಸಹಾಯಕ ಎಂಜಿನಿಯರ್ ಹುದ್ದೆ ಬಡ್ತಿ ಪಡೆಯಲು ಅರ್ಹಳಿದ್ದೇನೆ ಎಂಬ ನನ್ನ ಮನವಿಯನ್ನು ಕೆಪಿಟಿಸಿಎಲ್‌ ಪರಿಗಣಿಸಿಲ್ಲ’ ಎಂದು ಸುಮಾ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.