ADVERTISEMENT

ಕೆಪಿಟಿಸಿಎಲ್‌ ಸ್ಪರ್ಧಾತ್ಮಕ ಪರೀಕ್ಷೆಯ ಸರಿ ಉತ್ತರ ಪ್ರಕಟ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2022, 21:31 IST
Last Updated 25 ಆಗಸ್ಟ್ 2022, 21:31 IST

ಬೆಂಗಳೂರು: ಕೆಪಿಟಿಸಿಎಲ್‌ ಸಹಾಯಕ ಎಂಜಿನಿಯರ್‌ ಹಾಗೂ ಕಿರಿಯ ಸಹಾಯಕರ ಹುದ್ದೆಗಳಿಗೆ ಜುಲೈನಲ್ಲಿ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಸರಿ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಗುರುವಾರ ಪ್ರಕಟಿಸಲಾಗಿದೆ.

ಪ್ರಾಧಿಕಾರ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಉತ್ತರಗಳಲ್ಲೇ ನೂರಾರು ತಪ್ಪುಗಳಿವೆ ಎಂದು ಅಭ್ಯರ್ಥಿಗಳು ದೂರಿದ್ದಾರೆ. ತಾತ್ಕಾಲಿಕ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳು ಇದ್ದರೆ recruitment2021kea@gmail.comಗೆ ಸೆ.2ರ ಸಂಜೆ 5.30ರ ಒಳಗೆ ಸಲ್ಲಿಸಬಹುದು ಎಂದು ಪ್ರಾಧಿಕಾರ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT