ADVERTISEMENT

ಕೆ.ಆರ್‌. ಮಾರುಕಟ್ಟೆ ಸ್ವಚ್ಛತೆಗೆ ನೀಲನಕ್ಷೆ: ರಾಜೇಂದ್ರ ಚೋಳನ್

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2025, 16:22 IST
Last Updated 14 ಸೆಪ್ಟೆಂಬರ್ 2025, 16:22 IST
<div class="paragraphs"><p>ಪಿ. ರಾಜೇಂದ್ರ ಚೋಳನ್‌&nbsp;</p></div>

ಪಿ. ರಾಜೇಂದ್ರ ಚೋಳನ್‌ 

   

ಬೆಂಗಳೂರು: ನಗರದ ಕೆ.ಆರ್. ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಕಾಪಾಡಲು ನೀಲನಕ್ಷೆ ಸಿದ್ಧಪಡಿಸಬೇಕು ಎಂದು  ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆ.ಆರ್. ಮಾರುಕಟ್ಟೆಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಚೋಳನ್‌, ‘ಕೆ.ಆರ್. ಮಾರುಕಟ್ಟೆಯಲ್ಲಿ ಹೆಚ್ಚು ಹಸಿ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಅದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಈ ನಿಟ್ಟಿನಲ್ಲಿ ಸಮಗ್ರ ಯೋಜನೆ ರೂಪಿಸಿ ನೀಲನಕ್ಷೆ ಸಿದ್ಧಪಡಿಸಿ ಹಂತ-ಹಂತವಾಗಿ ಅದನ್ನು ಅನುಷ್ಠಾನಗೊಳಿಸಲು ಕ್ರಮವಹಿಸಬೇಕು’ ಎಂದರು.

ADVERTISEMENT

ಮಾರುಕಟ್ಟೆಯಲ್ಲಿ ನಿತ್ಯ ಸುಮಾರು 70 ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಮೂರು ಪಾಳಿಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಎಲ್ಲಿಯೂ ತ್ಯಾಜ್ಯ ಬಿಸಾಡದಂತೆ ನೋಡಿಕೊಳ್ಳಬೇಕು. ತ್ಯಾಜ್ಯ ಸಂಗ್ರಹಿಸುವ ಸ್ಥಳವೂ ಸ್ವಚ್ಛವಾಗಿರಬೇಕು. ಮಾರುಕಟ್ಟೆ ಮುಂಭಾಗ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವವ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕೆ.ಆರ್. ಮಾರುಕಟ್ಟೆಯಲ್ಲಿ ಸ್ವಚ್ಛತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಕೇಂದ್ರ ನಗರ ಪಾಲಿಕೆಯ ಎಂಜಿನಿಯರ್‌ಗಳು, ಕಂದಾಯ ಅಧಿಕಾರಿಗಳು, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಅಧಿಕಾರಿಗಳ ಜೊತೆ ಕೂಡಲೇ ಸಭೆ ಏರ್ಪಡಿಸಲು ಮುಖ್ಯ ಎಂಜಿನಿಯರ್‌ಗೆ ಸೂಚನೆ ನೀಡಿದರು.

ಮುಖ್ಯ ಎಂಜಿನಿಯರ್‌ ವಿಜಯ್ ಕುಮಾರ್ ಹರಿದಾಸ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.