ಕೆ.ಆರ್.ಪುರ: ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳನ್ನು ಪತ್ತೆಹಚ್ಚುವ ಉದ್ದೇಶದಿಂದ ಮಹದೇವಪುರ ಬಿಜೆಪಿ ನಗರ ಮಂಡಲದ ಕಾರ್ಯಕರ್ತರು ವಿವಿಧ ಸ್ಥಳಗಳಲ್ಲಿ ಅಭಿಯಾನ ನಡೆಸಿದರು.
ತೂಬರಹಳ್ಳಿ, ಸಿದ್ದಾಪುರ ಹಾಗೂ ವಿವಿಧ ಸ್ಥಳಗಳಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವ ಸ್ಥಳಗಳಿಗೆ ನಗರ ಮಂಡಲ ಅಧ್ಯಕ್ಷ ಶ್ರೀಧರ್ ರೆಡ್ಡಿ ನೇತೃತ್ವದ ತಂಡ ಭೇಟಿ ನೀಡಿ ಆಧಾರ್ ಕಾರ್ಡ್, ಮತದಾನದ ಗುರುತಿನ ಚೀಟಿ ಸೇರಿದಂತೆ ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಶ್ರೀಧರ್ ರೆಡ್ಡಿ ಮಾತನಾಡಿ, ‘ಮಹದೇವಪುರ ಕ್ಷೇತ್ರದಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಜೆಗಳನ್ನು ಗುರುತಿಸಿ ಅವರ ದೇಶಕ್ಕೆ ವಾಪಾಸ್ ಕಳಿಸಲು ಮಾಜಿ ಸಚಿವ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಅಭಿಯಾನ ಕೈಗೊಂಡಿದ್ದೇವೆ. ಕ್ಷೇತ್ರದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ’ ಎಂದರು.
‘ಕಡಿಮೆ ಸಂಬಳಕ್ಕಾಗಿ ಕೆಲವರು ಬಾಂಗ್ಲಾ ಪ್ರಜೆಗಳಿಗೆ ಆಶ್ರಯ ನೀಡಿದ್ದಾರೆ. ದಾಖಲೆ ಪರಿಶೀಲನೆ ನಡೆಸಿದ ವೇಳೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡಿರುವುದು ಕಂಡು ಬಂದಿದೆ’ ಎಂದು ತಿಳಿಸಿದರು.
ಬಿಜೆಪಿ ಮುಖಂಡರಾದ ವರ್ತೂರು ಶ್ರೀಧರ್, ಜಯದೇವ, ನಾಗೇಶ್, ಗಗನ್ ಗೌಡ, ಹನುಮಂತೆಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.