ADVERTISEMENT

ಕಾಂಗ್ರೆಸ್ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2021, 20:56 IST
Last Updated 12 ಜೂನ್ 2021, 20:56 IST
ಕಾಂಗ್ರೆಸ್ ಕಾರ್ಯಕರ್ತರು ರಾಮಮೂರ್ತಿ ನಗರ ಪೆಟ್ರೋಲ್ ಬಂಕ್ ಬಳಿ ಗ್ರಾಹಕರಿಗೆ ಸಿಹಿ ಹಂಚಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿದರು
ಕಾಂಗ್ರೆಸ್ ಕಾರ್ಯಕರ್ತರು ರಾಮಮೂರ್ತಿ ನಗರ ಪೆಟ್ರೋಲ್ ಬಂಕ್ ಬಳಿ ಗ್ರಾಹಕರಿಗೆ ಸಿಹಿ ಹಂಚಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿದರು   

ಕೆ.ಆರ್.ಪುರ: ಪೆಟ್ರೋಲ್ ಮತ್ತು ಡೀಸೆಲ್‌ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಮಮೂರ್ತಿ ನಗರ ಪೆಟ್ರೋಲ್ ಬಂಕ್ ಬಳಿ ಗ್ರಾಹಕರಿಗೆ ಸಿಹಿ ಹಂಚುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಪೆಟ್ರೋಲ್ ದರ ₹ 100, ಮುಟ್ಟಿರುವ ಹಿನ್ನೆಲೆ ‘100 ನಾಟೌಟ್’ ಎಂದು ಬರೆದಿರುವ ಕೇಕ್ ಕತ್ತರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೆ.ಆರ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಮಂಜುನಾಥ್, ‘ಕೊರೋನಾ ಸಂಕಷ್ಟ ನಡುವೆಯೂ ದಿನೇ ದಿನೇ ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲಗಳ ದರ ಏರಿಕೆಯಾಗುತ್ತಲೇ ಇದೆ. ಇಂತಹ ಪರಿಸ್ಥಿತಿಯಲ್ಲಿ ಜನಸಾಮಾನ್ಯರು ಬದುಕುವುದಾರು ಹೇಗೆ ’ ಎ‌ಂದು ಪ್ರಶ್ನಿಸಿದರು.

ADVERTISEMENT

ನಗರ ಸಾಮಾಜಿಕ ಜಾಲತಾಣ ಕಾರ್ಯದರ್ಶಿ ಗಗನ್ ಯಾದವ್, ಕೆ.ಆರ್.ಪುರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಪ್ರವೀಣ್ ಗೌಡ, ವಾಡ್೯ ಅಧ್ಯಕ್ಷ ಕಲ್ಕೆರೆ ಸುನೀಲ್ ಕುಮಾರ್, ಎನ್ಎಸ್ ಯುಐ ಘಟಕದ ಅಧ್ಯಕ್ಷ ಪವನ್ ಕುಮಾರ್ ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.