ಕೆ.ಆರ್.ಪುರ: ಕಾಡ ಅಗ್ರಹಾರ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದ ಸುಮಾರು ₹8 ಕೋಟಿ ಮೌಲ್ಯದ ಸರ್ಕಾರಿ ಗ್ರಾಮ ಠಾಣಾ ಆಸ್ತಿಯನ್ನು ಬಿದರಹಳ್ಳಿ ಗ್ರಾಮ ಪಂಚಾಯಿತಿ ವಶಕ್ಕೆ ಪಡೆದುಕೊಂಡಿದೆ.
ಬೆಂಗಳೂರು ಪೂರ್ವ ತಾಲ್ಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಡ ಅಗ್ರಹಾರ ಗ್ರಾಮದಲ್ಲಿ ಸರ್ಕಾರಿ ಸ್ವತ್ತಿನ ಸಂಖ್ಯೆ 51/1 ರಲ್ಲಿ 125×170 ಅಡಿ ವಿಸ್ತೀರ್ಣದ ಜಾಗವನ್ನು ಸಂರಕ್ಷಣೆ ಮಾಡಿದೆ.
‘ಗ್ರಾಮ ಠಾಣಾ ಆಸ್ತಿಯನ್ನು ನಾರಾಯಣರೆಡ್ಡಿ ಹೆಸರಿಗೆ ಖಾತೆ ಮಾಡಿಕೊಡಲು ಹಿಂದಿನ ಇಒ ಮಂಜುನಾಥ್ ಅದೇಶ ನೀಡಿದ್ದು, ಇದನ್ನು ಪ್ರಶ್ನಿಸಿ ಗ್ರಾಮ ಪಂಚಾಯಿತಿ ಹೈಕೋರ್ಟ್ ಮೊರೆಹೋಗಿತ್ತು. ಈ ವಿವಾದವನ್ನು ಗ್ರಾಮ ಪಂಚಾಯಿತಿಯೇ ನಿರ್ಧಾರ ಕೈಗೊಳ್ಳುವಂತೆ ಬಿದರಹಳ್ಳಿ ಗ್ರಾಮ ಪಂಚಾಯಿತಿಗೆ ನ್ಯಾಯಾಲಯ ಆದೇಶ ನೀಡಿತ್ತು. ಹಾಗಾಗಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ದಾಖಲೆಗಳನ್ನು ಪರಿಶೀಲಿಸಿದಾಗ, ನಾರಾಯಣರೆಡ್ಡಿ ಅವರು ಸರ್ಕಾರಿ ಆಸ್ತಿಯನ್ನು ಕಬಳಿಸಲು ಪ್ರಯತ್ನಿಸಿರುವುದು ದೃಢಪಟ್ಟಿರುವುದು ಗೊತ್ತಾಗಿದೆ’ ಎಂದು ಪಂಚಾಯಿತಿ ಸದಸ್ಯ ಮುನಿಯಪ್ಪ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.