ADVERTISEMENT

ನ.11ರಿಂದ ಜಿಕೆವಿಕೆಯಲ್ಲಿ ‘ಕೃಷಿ ಮೇಳ’

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 17:31 IST
Last Updated 18 ಅಕ್ಟೋಬರ್ 2021, 17:31 IST

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ನವೆಂಬರ್ 11ರಿಂದ 14ರವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಜಿಕೆವಿಕೆ) ‘ಕೃಷಿ ಮೇಳ’ ಆಯೋಜಿಸಿದೆ.

ಈ ಬಾರಿಯೂ ಮೇಳವನ್ನು ಭೌತಿಕವಾಗಿ ಹಾಗೂ ಆನ್‌ಲೈನ್‌ ಮೂಲಕ ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಮೇಳದಲ್ಲಿ 10 ಹೊಸ ತಳಿಗಳು ಹಾಗೂ 28 ಕೃಷಿ ತಂತ್ರಜ್ಞಾನಗಳು ಬಿಡುಗಡೆಗೊಳ್ಳಲಿವೆ.

ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿರುವ ರೈತ ಮತ್ತು ರೈತ ಮಹಿಳೆಯರಿಗೆಪ್ರತಿ ವರ್ಷದಂತೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಬಾರಿಯ ವಸ್ತು ಪ್ರದರ್ಶನದಲ್ಲಿ 250 ಮಳಿಗೆಗಳು ಇರಲಿವೆ. ಜಿಕೆವಿಕೆ ಆವರಣದಿಂದ ಸಭಾಂಗಣಕ್ಕೆ ತಲುಪಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.