ADVERTISEMENT

Krishna Janmashtami 2023: ಗೋಪಾಲಸ್ವಾಮಿ ದೇವಸ್ಥಾನದಲ್ಲಿ ಶ್ರೀಕೃಷ್ಣಜನ್ಮಷ್ಟಮಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2023, 15:44 IST
Last Updated 6 ಸೆಪ್ಟೆಂಬರ್ 2023, 15:44 IST
<div class="paragraphs"><p>ಕೆ.ಆರ್.ಪುರದ ಶ್ರೀವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಪಮಿ ಅದ್ದೂರಿಯಾಗಿ ಆಚರಿಸಲಾಯಿತು.</p></div>

ಕೆ.ಆರ್.ಪುರದ ಶ್ರೀವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಪಮಿ ಅದ್ದೂರಿಯಾಗಿ ಆಚರಿಸಲಾಯಿತು.

   

ಕೆ.ಆರ್.ಪುರ: ಕೆ.ಆರ್.ಪುರ ಸಮೀಪದ ದೇವಸಂದ್ರ ಮುಖ್ಯರಸ್ತೆಯಲ್ಲಿರುವ ಶ್ರೀವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ವಿಜೃಂಭಣೆಯಿಂದ ಜರುಗಿತು.

ಮುಂಜಾನೆ ದೇವಾಲಯದಲ್ಲಿ ದೇವರಿಗೆ ಅಭಿಷೇಕ, ವಿಶೇಷ ಪೂಜಾ ಕೈಂಕರ್ಯ, ಹೋಮ, ಹವನ ನೆರವೇರಿತು. ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ADVERTISEMENT

ದೇವಸಂದ್ರ, ಅಯ್ಯಪ್ಪನಗರ, ರಾಮಮೂರ್ತಿನಗರ, ಬಸವನಪುರ, ಹೂಡಿ, ಭಟ್ಟರಹಳ್ಳಿ, ಟಿಸಿ ಪಾಳ್ಯ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದು ಪುನಿತರಾದರು.

ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಬಾಬು, ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಡಿ.ಎ.ಗೋಪಾಲ್, ಮುಖಂಡರಾದ ಚಲಪತಿ, ದೇವೇಂದ್ರ, ಚನ್ನಕೇಶವಲು, ಅಗರ ಪ್ರಕಾಶ್, ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.