ADVERTISEMENT

ಕೆ.ಆರ್.ಪುರ: ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಕೃಷ್ಣ ಜನ್ಮಾಷ್ಠಮಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 14:25 IST
Last Updated 16 ಆಗಸ್ಟ್ 2025, 14:25 IST
ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಶ್ರೀವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಹೋಮ ಹವನ ಹಮ್ಮಿಕೊಳ್ಳಲಾಗಿತ್ತು.
ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಶ್ರೀವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಹೋಮ ಹವನ ಹಮ್ಮಿಕೊಳ್ಳಲಾಗಿತ್ತು.   

ಕೆ.ಆರ್.ಪುರ: ಸಮೀಪದ ದೇವಸಂದ್ರದ ಮುಖ್ಯರಸ್ತೆಯಲ್ಲಿರುವ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ದೇವರಿಗೆ ಸುಪ್ರಭಾತ, ವಿಶ್ವಸೇನಾ ಆರಾಧನೆ, ವಾಸುದೇವ ಪುಣ್ಯಾಪ ವಚನ ಋದ್ದಿಗಾವರಣ, ರತ್ಮಬಂಧನ, ಅನಿರ್ವಾಣ, ದೀಪಾರೋಹಣ, ದ್ವಾರತೋರಣ, ಧ್ವಜ ಕುಂಭಾರಾಧನೆ, ಏಕೋನ ಪಂಚಾಶೀತ್ರ, ಕಳಸಸ್ಥಾಪನೆ ಷೋಡಶೋಪಚಾರ ಪೂಜೆ ನಡೆದವು. ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಕ್ತರಿಗೆ ಅನ್ನಪ್ರಸಾದ ಏರ್ಪಡಿಸಲಾಗಿತ್ತು.

ದೇವಸಂದ್ರ, ಅಯ್ಯಪ್ಪನಗರ, ರಾಮಮೂರ್ತಿನಗರ, ಬಸವನಪುರ, ಹೂಡಿ, ಭಟ್ಟರಹಳ್ಳಿ, ಟಿಸಿ ಪಾಳ್ಯ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತಾದಿಗಳು ಬಂದಿದ್ದರು. ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಮಾಜಿ ಶಾಸಕಿ ಪೂರ್ಣಿಮಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಮುಖಂಡರಾದ ಡಿ.ಕೆ.ದೇವೇಂದ್ರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT