ADVERTISEMENT

‘ದಲಿತ ಸಮುದಾಯಕ್ಕೆ ಒಡೆಯರ್ ಕೊಡುಗೆ ಅಪಾರ’

ಸಮಾನತೆ ಸಿಗುವವರೆಗೆ ಹೋರಾಟ ಮುಂದುವರಿಯಲಿ: ಉಪಮುಖ್ಯಮಂತ್ರಿ ಜಿ. ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 4 ಜೂನ್ 2019, 19:34 IST
Last Updated 4 ಜೂನ್ 2019, 19:34 IST

ಬೆಂಗಳೂರು: ‘ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಉದ್ದೇಶದಿಂದ ಶಿಕ್ಷಣ ಕ್ಷೇತ್ರದಲ್ಲೂ ದಲಿತ ಮಕ್ಕಳು ಓದಲು ಅವಕಾಶ ಕಲ್ಪಿಸಿಕೊಟ್ಟಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್. ನಮ್ಮ ಸಮುದಾಯಕ್ಕೆ ಅವರ ಕೊಡುಗೆ ಅಪಾರ’ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅಭಿಪ್ರಾಯಪಟ್ಟರು.

ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಎಂ. ವೆಂಕಟಸ್ವಾಮಿ ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಡಾ. ಬಿ.ಆರ್. ಅಂಬೇಡ್ಕರ್‌ ಆಶಯದಂತೆ ಸಮಾನತೆ ಸಿಗುವವರೆಗೂ ದಲಿತ ಸಮುದಾಯ ಸದಾ ಹೋರಾಟ ನಡೆಸುತ್ತಿರಬೇಕು’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT