ADVERTISEMENT

‘ಶಾಲೆಗಳಲ್ಲಿ ಒಡೆಯರ್‌ ಜಯಂತಿ ಆಚರಣೆ’

​ಪ್ರಜಾವಾಣಿ ವಾರ್ತೆ
Published 4 ಜೂನ್ 2019, 19:35 IST
Last Updated 4 ಜೂನ್ 2019, 19:35 IST
ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಎಂ.ಎ.ಗೋಪಾಲಸ್ವಾಮಿ, ಸುಧೀಂದ್ರ ಹಾಲ್ದೊಡ್ಡೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಎಂ.ಕೆ. ಜಾನಕಿ ಪುಷ್ಪನಮನ ಸಲ್ಲಿಸಿದರು - ಪ್ರಜಾವಾಣಿ ಚಿತ್ರ
ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಎಂ.ಎ.ಗೋಪಾಲಸ್ವಾಮಿ, ಸುಧೀಂದ್ರ ಹಾಲ್ದೊಡ್ಡೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಎಂ.ಕೆ. ಜಾನಕಿ ಪುಷ್ಪನಮನ ಸಲ್ಲಿಸಿದರು - ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಪ್ರತಿವರ್ಷ ಒಡೆಯರ್‌ ಜಯಂತಿಯನ್ನು ಸರ್ಕಾರದ ಮಟ್ಟದಲ್ಲಷ್ಟೇ ಆಚರಿಸಲಾಗುತ್ತಿದೆ. ಮುಂದಿನ ವರ್ಷದಿಂದ ಎಲ್ಲ ಶಾಲೆಗಳಲ್ಲಿ ಜಯಂತಿ ಆಚರಿಸುವ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜತೆಗೆ ಚರ್ಚಿಸುತ್ತೇನೆ’ ಎಂದುವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿಯಲ್ಲಿ ಅವರು ಮಾತನಾಡಿದರು.

ಬಾಹ್ಯಾಕಾಶ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಮಾತನಾಡಿ, ‘ಆಗಿನ ಕಾಲದಲ್ಲೇ ವಿಜ್ಞಾನ ಹಾಗೂ ತಂತ್ರಜ್ಞಾನ ವಿಚಾರಗಳಲ್ಲಿನಾಲ್ವಡಿ ಕೃಷ್ಣರಾಜ ಒಡೆಯರ್‌ ದೂರದರ್ಶಿತ್ವ ಹೊಂದಿದ್ದರು. ಅವರ ನೆರವಿನಿಂದ ಏಷ್ಯಾದಲ್ಲೇ ಮೊಟ್ಟ ಮೊದಲ ವಿದ್ಯುತ್‌ ಪಡೆದ ನಗರ ನಿರ್ಮಾಣವಾಯಿತು ಎಂದು ನೆನೆದರು.

ADVERTISEMENT

‘ವಿದೇಶಗಳಿಗೆ ಭೇಟಿ ನೀಡಿ ಅಲ್ಲಿನ ತಂತ್ರಜ್ಞಾನವನ್ನು ನಮ್ಮ ದೇಶಕ್ಕೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ.ಬೆಂಗಳೂರಿನಲ್ಲಿ ಎಚ್‌ಎಎಲ್‌ ವಿಮಾನ ತಯಾರಿಕಾ ಘಟಕ ನಿರ್ಮಾಣಕ್ಕೆ ಮೂಲ ಪ್ರೇರಣೆಯಾಗಿದ್ದರು. ಇದರಿಂದಾಗಿ, ಬೆಂಗಳೂರು ಇಂದು ವಿಜ್ಞಾನ ನಗರ ಎನಿಸಿಕೊಂಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.