ADVERTISEMENT

ಕೆಆರ್‌ಎಸ್‌: ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 5:20 IST
Last Updated 17 ಅಕ್ಟೋಬರ್ 2020, 5:20 IST

ಬೆಂಗಳೂರು: ರಾಜರಾಜೇಶ್ವರಿನಗರದ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್‌ಎಸ್‌) ಕಣಕ್ಕೆ ಇಳಿದಿರುವ ಕೆ.ಬಿ.ಅರವಿಂದ್ ಅವರ ಚುನಾವಣಾ ಪ್ರಚಾರ ಕಚೇರಿಯನ್ನು ಸಾಮಾಜಿಕ ಕಾರ್ಯಕರ್ತ ಎಚ್.ಎಂ.ವೆಂಕಟೇಶ್ ಅವರು ರಾಜರಾಜೇಶ್ವರಿ ನಗರದಲ್ಲಿ ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು,' ಈ ಭ್ರಷ್ಟ ಪಕ್ಷಾಂತರಿಗಳು, ಅವಕಾಶವಾದಿ ಹಾಗೂ ಹಣದ ಹಪಾಹಪಿ ಹೊಂದಿರುವ ರಾಜಕಾರಣಿಗಳ ಬಗ್ಗೆ ಜನರಿಗೆ ತಿಳಿಸಿ, ಪ್ರಾಮಾಣಿಕ ರಾಜಕೀಯದ ಅಭ್ಯರ್ಥಿಯನ್ನು ಗೆಲ್ಲಿಸಲು ಸಿಕ್ಕಿರುವ ಅವಕಾಶ ಇದು. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಇದನ್ನು ಸದ್ಬಳಕೆ ಮಾಡಿಕೊಳ್ಳಲಿ' ಎಂದು ಶುಭ ಹಾರೈಸಿದರು.

ಪಕ್ಷದ ರಾಜ್ಯ ಉಪಾಧ್ಯಕ್ಷ ಅಮೃತ್ ಶೆಣೈ,' ರಾಜ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ಮೀಸಲಾಗದ ಒಂದು ಪ್ರಾಮಾಣಿಕ ಪ್ರಾದೇಶಿಕ ಪಕ್ಷದ ಅವಶ್ಯಕ. ಅದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಾತ್ರ ಸಾಧ್ಯ. ಪಕ್ಷದ ಎಲ್ಲ ಸದಸ್ಯರು ಪರಿಶ್ರಮ ಹಾಕಬೇಕಿದೆ' ಎಂದರು.

ADVERTISEMENT

ಕೆಆರ್‌ಎಸ್‌ಪ್ರಧಾನ ಕಾರ್ಯದರ್ಶಿ ದೀಪಕ್, ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ, ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.