ADVERTISEMENT

ಸೀಮಂತ್‌ಕುಮಾರ್ ಸಿಂಗ್ ಬದಲಾವಣೆಗೆ ಕೆಆರ್‌ಎಸ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 20:05 IST
Last Updated 5 ಜುಲೈ 2022, 20:05 IST
ರವಿಕೃಷ್ಣ ರೆಡ್ಡಿ
ರವಿಕೃಷ್ಣ ರೆಡ್ಡಿ    

ಬೆಂಗಳೂರು: ಐಪಿಎಸ್‌ ಅಧಿಕಾರಿ ಸೀಮಂತ್‌ಕುಮಾರ್ ಸಿಂಗ್ ವಿರುದ್ಧ ಬಳ್ಳಾರಿ ಗಣಿ ಅಕ್ರಮಗಳಿಗೆ ಸಹಕರಿಸಿದ ಆರೋಪವಿದ್ದು, ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಎಡಿಜಿಪಿ ಸ್ಥಾನದಿಂದ ಬದಲಾವಣೆ ಮಾಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್‌) ಆಗ್ರಹಿಸಿದೆ.

‘ಎಸಿಬಿ ವಿರುದ್ಧವೇ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್ ಕಿಡಿ ಕಾರಿದ್ದು, ಅವರನ್ನು ವರ್ಗಾವಣೆ ಮಾಡಿಸುವಷ್ಟು ಭ್ರಷ್ಟರು ಸಶಕ್ತರಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ನಿಷ್ಠುರವಾಗಿ ನ್ಯಾಯಾಂಗದ ಜವಾಬ್ದಾರಿ ನಿರ್ವಹಿಸುತ್ತಿದ್ದ ನ್ಯಾಯಮೂರ್ತಿಗಳನ್ನು ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡಿರುವ ಉದಾಹರಣೆಗಳೂ ಇವೆ’ ಎಂದು ಕೆಆರ್‌ಎಸ್‌ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣ ರೆಡ್ಡಿ ತಿಳಿಸಿದ್ದಾರೆ.

‘ಪ್ರಾಮಾಣಿಕ ನ್ಯಾಯಮೂರ್ತಿ ಗಳನ್ನು ವರ್ಗಾವಣೆ ಮಾಡಿದರೆ ಅಂತಿಮವಾಗಿ ರಾಜ್ಯದ ಜನತೆಗೆ ನಷ್ಟವಾಗಲಿದೆ. ಈ ರೀತಿ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ’ ಎಂದಿದ್ದಾರೆ.

ADVERTISEMENT

‘ಕಳಂಕಿತ ವ್ಯಕ್ತಿಯೊಬ್ಬರು ಎಸಿಬಿ ಮುಖ್ಯಸ್ಥರಾಗಿರುವುದು ಅಕ್ಷಮ್ಯ ಮತ್ತು ನಾಚಿಕೆಗೇಡು. ಸೀಮಂತ್‌ಕುಮಾರ್ ಸಿಂಗ್ ಅವರನ್ನು ಎಸಿಬಿಯಿಂದ ವರ್ಗಾವಣೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.