ADVERTISEMENT

ಪ್ರಚೋದನಕಾರಿ ಭಾಷಣ: ಈಶ್ವರಪ್ಪ ಖುಲಾಸೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2019, 19:42 IST
Last Updated 5 ಏಪ್ರಿಲ್ 2019, 19:42 IST

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ಶಾಸಕ ಕೆ.ಎಸ್ ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

2013ರ ವಿಧಾನಸಭೆ ಚುನಾವಣೆ ವೇಳೆ ಶಿವಮೊಗ್ಗ ವಿಪ್ರ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈಶ್ವರಪ್ಪ ‘ಬ್ರಾಹ್ಮಣರ ಹೆಣ್ಣುಮಕ್ಕಳನ್ನು ಅಲ್ಪಸಂಖ್ಯಾತ ಸಮುದಾಯದ ಹುಡುಗರು ಹೊತ್ತುಕೊಂಡು ಹೋಗುತ್ತಾರೆ ಎಂದಿದ್ದಾರೆ. ಆ ಮೂಲಕ ಚುನಾವಣೆ ವೇಳೆ ದ್ವೇಷ ಭಾವನೆ ಮೂಡಿಸಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿ ಕೋಟೆ ಪೊಲೀಸ್ ಠಾಣೆಯಲ್ಲಿಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದರು. ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಸಾಕ್ಷಾಧಾರಗಳ ಕೊರತೆಯಿಂದ ಈಶ್ವರಪ್ಪ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.