ADVERTISEMENT

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 14:30 IST
Last Updated 29 ಡಿಸೆಂಬರ್ 2022, 14:30 IST

ಬೆಂಗಳೂರು: ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಯಲ್ಲಿ (ಕೆಎಸ್‌ಡಿಎಲ್‌) ಕಾರ್ಖಾನೆಯಲ್ಲಿ ಕಾಯಂ ನೌಕರರಿಗೆ ನೀಡುತ್ತಿರುವ ಕನಿಷ್ಠ ವೇತನವನ್ನು ಮಾರುಕಟ್ಟೆ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರಿಗೆ ನೀಡಬೇಕು’ ಎಂದು ಕೆಎಸ್‌ಡಿಎಲ್ ಮಾರ್ಕೆಟಿಂಗ್ ಸ್ಟಾಫ್ ಆ್ಯಂಡ್ ವರ್ಕರ್ಸ್‌ ಅಸೋಸಿಯೇಷನ್ ಒತ್ತಾಯಿಸಿದೆ.

‘ಬೆಂಗಳೂರು ಮಾರುಕಟ್ಟೆ ವಿಭಾಗದ ನೌಕರರಿಗೆ ಐದು ವರ್ಷಗಳಿಂದ ಬೋನಸ್‌ ನೀಡಿಲ್ಲ. ಇದೇ ವಿಭಾಗದಲ್ಲಿ 25 ವರ್ಷಗಳಿಂದ ಕೆಲಸ ಮಾಡುತ್ತಿರುವ ಎಲ್ಲ ನೌಕರರನ್ನು ಕಾಯಂಗೊಳಿಸಿ, ಆರೋಗ್ಯ ವಿಮೆಯ ಸೌಲಭ್ಯ ವಿಸ್ತರಿಸಬೇಕು. ಇಲ್ಲದಿದ್ದರೆ ಜ.9ರಂದು ಕೆಎಸ್‌ಡಿಎಲ್ ಕಾರ್ಖಾನೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಅಸೋಸಿಯೇಷನ್ ಅಧ್ಯಕ್ಷ ಜಿ.ಆರ್. ಶಿವಶಂಕರ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕೆಎಸ್‌ಡಿಎಲ್ ಬೆಂಗಳೂರು ಮಾರುಕಟ್ಟೆ ವಿಭಾಗದ ಕೇಂದ್ರ ಕಚೇರಿಗೆ ನೀಡಿರುವ ಗುರಿಯನ್ನು ಬಿಟ್ಟು ಪ್ರತ್ಯೇಕವಾಗಿ ಗುರಿ ಹೆಚ್ಚಿಸಿರುವುದು ಅವೈಜ್ಞಾನಿಕವಾಗಿದೆ. ಇದರಿಂದ ಕಾರ್ಮಿಕರಿಗೆ ಸಿಗಬೇಕಿದ್ದ ಭತ್ಯೆ ಸಿಗುತ್ತಿಲ್ಲ. ಕಾರ್ಖಾನೆಯ ಉತ್ಪಾದನೆ ಮತ್ತು ಮಾರುಕಟ್ಟೆ ವಿಭಾಗದಲ್ಲಿ 1800ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರಿಗೆ ಯಾವುದೇ ರೀತಿಯ ಸೌಲಭ್ಯಗಳು ದೊರೆಯುತ್ತಿಲ್ಲ. ಜ. 5ರೊಳಗೆ ಆಡಳಿತ ಮಂಡಳಿಯು ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.