ADVERTISEMENT

ಕೆಸೆಟ್‌, ಟಿಇಟಿ ಒಂದೇ ದಿನ: ವಿದ್ಯಾರ್ಥಿಗಳ ಆತಂಕ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 22:25 IST
Last Updated 12 ಮಾರ್ಚ್ 2020, 22:25 IST

ಕಲಬುರ್ಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇದೇ 15ರಂದು ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ಏಪ್ರಿಲ್‌ 12ಕ್ಕೆ ಮುಂದೂಡಲಾಗಿದೆ.

ಆದರೆ, ಅದೇ ದಿನ ಮೈಸೂರು ವಿಶ್ವವಿದ್ಯಾಲಯ ನಡೆಸುವಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆಸೆಟ್‌) ಇರುವುದರಿಂದ ಎರಡೂ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅತಂತ್ರರಾಗಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಗುರುವಾರ ಈ ಸಂಬಂಧ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಣೆ ನೀಡಿದೆ. ಅದೇ ದಿನ ಪರೀಕ್ಷೆ ನಡೆಸಿದರೆ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ, ಸರ್ಕಾರ ಯಾವುದಾದರೂ ಒಂದು ಪರೀಕ್ಷೆಯನ್ನು ಬೇರೆ ದಿನ ನಡೆಸಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.