ಪ್ರಾತಿನಿಧಿಕ ಪತ್ರ
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಲ್ಲೇಶ್ವರದ ಮಹಿಳಾ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಎಸ್ಸಿ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ, ವಿವಿಧ ಸ್ನಾತಕೋತ್ತರ ಸರ್ಟಿಫಿಕೇಟ್ ಪ್ರೋಗ್ರಾಂ, ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಇದೆ. ಆಸಕ್ತರು ಅಕ್ಟೋಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ www.ksoumysuru.ac.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.