ADVERTISEMENT

ಸಾರ್ವಜನಿಕರ ಸಮ್ಮುಖದಲ್ಲೇ ಸಭೆ: ಕೆಎಸ್‌ಪಿಸಿಬಿ ಭರವಸೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 20:55 IST
Last Updated 23 ಫೆಬ್ರುವರಿ 2021, 20:55 IST

ಬೆಂಗಳೂರು: ತುಮಕೂರು ರಸ್ತೆಯಿಂದ ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯನ್ನು ಜನರ ಸಮ್ಮುಖದಲ್ಲೇ ನಡೆಸುವುದಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ(ಕೆಎಸ್‌ಪಿಸಿಬಿ) ಹೈಕೋರ್ಟ್‌ಗೆ ತಿಳಿಸಿದೆ.

ಆನ್‌ಲೈನ್‌ನಲ್ಲಿ ಸಭೆ ನಡೆಸಲು ಕೆಎಸ್‌ಪಿಸಿಬಿ ತೀರ್ಮಾನಿಸಿದ್ದನ್ನು ಪ್ರಶ್ನಿಸಿ ಕಾನೂನು ವಿದ್ಯಾರ್ಥಿಗಳು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ‘ಆನ್‌ಲೈನ್‌ನಲ್ಲಿ ಸಭೆ ನಡೆಸುವುದು 2006ರ ಪರಿಸರ ಪರಿಣಾಮ ಮೌಲ್ಯಮಾಪನ(ಇಐಎ) ಅಧಿಸೂಚನೆಗೆ ವಿರುದ್ಧವಾಗಿದೆ’ ಎಂದು ಆರೋಪಿಸಿದ್ದರು.

‘ಕೋವಿಡ್ ಮಾರ್ಗಸೂಚಿಗಳ ಪ್ರಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರ ಸಮ್ಮುಖದಲ್ಲೇ ಸಭೆ ನಡೆಸಲಾಗುವುದು’ ಎಂದು ಕೆಎಸ್‌ಪಿಸಿಬಿ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಭರವಸೆ ನೀಡಿದರು. ಬಳಿಕ ಪೀಠ ಅರ್ಜಿ ವಿಲೇವಾರಿ ಮಾಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.