ADVERTISEMENT

12 ಸಾವಿರ ಬಸ್‌ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 20:53 IST
Last Updated 26 ಏಪ್ರಿಲ್ 2021, 20:53 IST

ಬೆಂಗಳೂರು: 14 ದಿನಗಳ ಕರ್ಫ್ಯೂ ಕಾರಣದಿಂದ ಊರುಗಳಿಗೆ ತೆರಳಲು ಹೊರಟಿರುವ ಜನರಿಗೆ ಅನುಕೂಲ ಆಗುವಂತೆ 12 ಸಾವಿರ ಬ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಂಗಳೂರಿನಿಂದ ಹೊರ ಜಿಲ್ಲೆಗಳಿಗೆ ಮತ್ತು ಇತರ ಪ್ರದೇಶಗಳಿಗೆ ಈ ಬಸ್‌ಗಳು ಸಂಚರಿಸಲಿವೆ. ಮಂಗಳವಾರ ರಾತ್ರಿ ಕರ್ಫ್ಯೂ ಆರಂಭ ಆಗುವುದರೊಳಗೆ ಈ ಬಸ್‌ಗಳ ಕಾರ್ಯಾಚರಣೆ ಮುಕ್ತಾಯಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪ್ರಯಾಣ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT