ಬೈಕ್ ಮೇಲೆ KSRTC ಬಸ್ ಪಲ್ಟಿ: PSI ನಾಗರಾಜ್ ಸಾವು– ಕನಕಪುರ ರಸ್ತೆಯಲ್ಲಿ ಘಟನೆ
ರಾಮನಗರ: ಜಿಲ್ಲೆಯ ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ ಬಸ್ ಮೋರಿಗೆ ಪಲ್ಟಿಯಾಗಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಮೃತರು. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರನ್ನು ದಯಾನಂದ ಸಾಗರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಬಸ್ಸು ಬೆಳಿಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕಗ್ಗಲೀಪುರ ಠಾಣೆ ಸಮೀಪ ನಿಯಂತ್ರಣ ಕಳೆದುಕೊಂಡ ಚಾಲಕ, ರಸ್ತೆ ವಿಭಜಕದ ಮೇಲೆ ಹತ್ತಿಸಿದ್ದಾನೆ. ಪಕ್ಕದ ರಸ್ತೆಗೆ ನುಗ್ಗಿದ ಬಸ್, ಎದುರಿಗೆ ಬಂದ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕ್ ಗೆ ಡಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗರಾಜ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.