ADVERTISEMENT

ಬಸ್‌ ನಿಲ್ದಾಣದಲ್ಲಿ ಉಗುಳಿದವರಿಂದ ₹7.25 ಲಕ್ಷ ದಂಡ ವಸೂಲಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2023, 20:28 IST
Last Updated 5 ಜೂನ್ 2023, 20:28 IST
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯ ಆವರಣದಲ್ಲಿ ಸೋಮವಾರ ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಲಾಯಿತು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯ ಆವರಣದಲ್ಲಿ ಸೋಮವಾರ ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಲಾಯಿತು   

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯ ಆವರಣದಲ್ಲಿ ಸೋಮವಾರ ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಲಾಯಿತು.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಮಾತನಾಡಿ, ‘ಬಸ್ ನಿಲ್ದಾಣ, ಘಟಕ, ವಿಭಾಗೀಯ ಕಚೇರಿ, ಕಾರ್ಯಾಗಾರಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದವರಿಗೆ ತಲಾ ₹ 200ರಂತೆ ದಂಡ ವಿಧಿಸಲಾಗಿದೆ. 2022–23ರಲ್ಲಿ ₹ 29.51 ಲಕ್ಷ ದಂಡ ಸಂಗ್ರಹವಾಗಿದೆ. ಬಯಲು ಮೂತ್ರ ವಿಸರ್ಜನೆ ಮಾಡಿದವರಿಗೆ ತಲಾ ₹ 100 ದಂಡ ವಿಧಿಸಲಾಗಿದೆ. ಒಂದು ವರ್ಷದಲ್ಲಿ ₹ 17.12 ಲಕ್ಷ ದಂಡ ಸಂಗ್ರಹವಾಗಿದೆ. ಸಾರ್ವಜನಿಕವಾಗಿ ಉಗುಳಿದವರಿಂದ ₹ 7.25 ಲಕ್ಷ ದಂಡ ಸಂಗ್ರಹಿಸಲಾಗಿದೆ’ ಎಂದು ವಿವರಿಸಿದರು.

ನಿರ್ದೇಶಕ ಪ್ರಶಾಂತ್ ಕುಮಾರ್ ಮತ್ತು ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.