ADVERTISEMENT

ಎಲ್ಲ ಬಸ್‌ ಕಾರ್ಯಾಚರಣೆ: ಸಂಭ್ರಮಾಚರಣೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 16:57 IST
Last Updated 12 ಏಪ್ರಿಲ್ 2022, 16:57 IST
   

ಬೆಂಗಳೂರು: ಮೂರು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಎಲ್ಲಾ ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದ್ದು, ಆ ಸಂದರ್ಭವನ್ನು ಹಬ್ಬದಂತೆ ಸಂಭ್ರಮಾಚರಣೆ ಮಾಡಲು ನಿಗಮ ಸಿದ್ಧತೆ ಮಾಡಿಕೊಂಡಿದೆ.

ಏ.14ರಿಂದ 17ರವರೆಗೆ ಸಾಲು ರಜೆಗಳಿದ್ದು, ಆ ಸಂದರ್ಭದಲ್ಲಿ ಹೊರ ಊರುಗಳಿಗೆ ಹೋಗುವ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಏ.13ರಿಂದ 17ರವರೆಗೆ 200 ವಿಶೇಷ ಬಸ್‌ಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿಕೊಂಡಿದೆ.

ರಾಜಹಂಸ, ಹವಾನಿಯಂತ್ರಿತ ರಹಿತ ಸ್ಲೀಪರ್ ಬಸ್‌ಗಳು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಆರಂಭಿಸಲಿವೆ. ವೋಲ್ವೊ ಮತ್ತು ಹವಾನಿಯಂತ್ರಿತ ಸ್ಲೀಪರ್ ಬಸ್‌ಗಳು ಶಾಂತಿನಗರದ ಘಟಕ-4ರ ಮುಂಭಾಗದ ಸರ್ವೀಸ್ ರಸ್ತೆಯಿಂದ ಕಾರ್ಯಾಚರಣೆ ಮಾಡಲಿವೆ.

ADVERTISEMENT

ಅಲ್ಲಿ ಪ್ರಯಾಣಿಕರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಕುಡಿಯುವ ನೀರು, ಬೆಳಕು ಮತ್ತು ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್ ಹತ್ತುವ ಪ್ರಯಾಣಿಕರಿಗೆ ಗುಲಾಬಿ ಹೂವು, ಲೇಖನಿ, ಪುಟಾಣಿಗಳಿಗೆ ಸಿಹಿ ವಿತರಿಸುವ ಮೂಲಕ ವಿಶೇಷ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.