ADVERTISEMENT

ಕೆಎಸ್‌ಆರ್‌ಟಿಸಿ: 16ರಿಂದ ಚಾಲನಾ ವೃತ್ತಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2024, 15:58 IST
Last Updated 4 ಡಿಸೆಂಬರ್ 2024, 15:58 IST
<div class="paragraphs"><p>ಕೆಎಸ್‌ಆರ್‌ಟಿಸಿ ಬಸ್‌ಗಳು</p></div>

ಕೆಎಸ್‌ಆರ್‌ಟಿಸಿ ಬಸ್‌ಗಳು

   

ಬೆಂಗಳೂರು: ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾದವರಿಗೆ ಹಾಸನ ತರಬೇತಿ ಕೇಂದ್ರದಲ್ಲಿ ಡಿ. 16ರಿಂದ ಚಾಲನಾ ವೃತ್ತಿ ಪರೀಕ್ಷೆ ನಡೆಯಲಿದೆ.

ಹಾಸನದಲ್ಲಿ ಪರೀಕ್ಷೆ ಬರೆಯಲು ನಿರ್ಧರಿಸಿರುವ ಅಭ್ಯರ್ಥಿಗಳು ಡಿ.10ರಂದು ಮಧ್ಯಾಹ್ನ 1ರಿಂದ ನಿಗಮದ ಅಧಿಕೃತ ವೆಬ್‌ಸೈಟ್ ksrtcjobs.karnataka.gov.in ನಿಂದ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಕರೆಪತ್ರದಲ್ಲಿ ತಿಳಿಸಿರುವ ದಾಖಲೆಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಬೇಕು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.