ADVERTISEMENT

ಕೆಎಸ್‌ಆರ್‌ಟಿಸಿ: 4,500 ಸಸಿ ನೆಡಲು ತೀರ್ಮಾನ

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 20:12 IST
Last Updated 5 ಜೂನ್ 2022, 20:12 IST
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಕೇಂದ್ರ ಕಚೇರಿಯ ಆಶ್ರಯದಲ್ಲಿ ಭಾನುವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ನಿಗಮದ ಸಿಬ್ಬಂದಿ ಪಾಲ್ಗೊಂಡಿದ್ದರು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಕೇಂದ್ರ ಕಚೇರಿಯ ಆಶ್ರಯದಲ್ಲಿ ಭಾನುವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ನಿಗಮದ ಸಿಬ್ಬಂದಿ ಪಾಲ್ಗೊಂಡಿದ್ದರು   

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಕೇಂದ್ರ ಕಚೇರಿಯ ಆಶ್ರಯದಲ್ಲಿ ಭಾನುವಾರ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ನಿಗಮದ ವ್ಯಾಪ್ತಿಯ ಬಸ್ ನಿಲ್ದಾಣಗಳು, ಘಟಕಗಳು, ಪ್ರಾದೇಶಿಕ ಕಾರ್ಯಾಗಾರ ಹಾಗೂ ತರಬೇತಿ ಕೇಂದ್ರಗಳಲ್ಲಿ ಪರಿಸರ ದಿನಾಚರಣೆ ನಡೆಯಿತು.

‘ಮುಂದಿನ 4 ತಿಂಗಳ ಅವಧಿಯಲ್ಲಿ ಸಂಕಲ್ಪತರು ಫೌಂಡೇಶನ್ ಆಶ್ರಯದಲ್ಲಿ 4,500 ಸಸಿ ನೆಡಲು ಯೋಜನೆ ರೂಪಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು. ‘ನಿಗಮದ 15 ವಿಭಾಗಗಳಲ್ಲಿ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳ ಅಂತರ್ಜಾಲ ಸೇವೆ ಒದಗಿಸಲಾಗಿದೆ. ಬಸ್ ನಿಲ್ದಾಣ, ಘಟಕ, ವಿಭಾಗೀಯ ಕಚೇರಿ ಹಾಗೂ ಕಾರ್ಯಾಗಾರಗಳಲ್ಲಿ ಸ್ವಚ್ಛತೆ ಕಾಪಾಡಲು ಬಯಲು ಮೂತ್ರ ವಿಸರ್ಜನೆ ನಿಷೇಧ ಜಾರಿಗೆ ತರಲಾಗಿದೆ. ಉಲ್ಲಂಘಿಸುವ ಪ್ರತಿ ವ್ಯಕ್ತಿಗೆ ₹ 100 ದಂಡ ವಿಧಿಸಲಾಗುತ್ತಿದೆ. 2021-22ನೇ ಸಾಲಿನಲ್ಲಿ ₹ 9.13 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಉಗುಳುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸಿದ ಪ್ರತಿ ವ್ಯಕ್ತಿಗೆ ₹ 100 ದಂಡ ವಿಧಿಸಿ, ₹ 4.22 ಲಕ್ಷ ದಂಡದ ಮೊತ್ತ ವಸೂಲಿ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ಮುಖ್ಯ ಸಂಚಾರ ವ್ಯವಸ್ಥಾಪಕ (ವಾಣಿಜ್ಯ) ಕೆ.ಆರ್.ವಿಶ್ವನಾಥ್, ಉಪ ಮುಖ್ಯಯಾಂತ್ರಿಕ ಎಂಜಿನಿಯರ್ ಎಂ.ಅನಿಲ್ ಕುಮಾರ್, ಮಂಡಳಿ ಕಾರ್ಯದರ್ಶಿ ಡಾ.ಟಿ.ಎಸ್‌.ಲತಾ, ಎಚ್.ಗುರುರಾಜ್, ಅರ್ಜುನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.