ADVERTISEMENT

ಕ್ರಿಸ್‌ಮಸ್‌ ರಜೆ: ಕೆಎಸ್‌ಆರ್‌ಟಿಸಿಯಿಂದ ಒಂದು ಸಾವಿರ ಹೆಚ್ಚುವರಿ ಬಸ್‌

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2023, 23:30 IST
Last Updated 19 ಡಿಸೆಂಬರ್ 2023, 23:30 IST
ಕೆಎಸ್‌ಆರ್‌ಟಿಸಿ ಬಸ್‌ಗಳು–ಸಾಂದರ್ಭಿಕ ಚಿತ್ರ
ಕೆಎಸ್‌ಆರ್‌ಟಿಸಿ ಬಸ್‌ಗಳು–ಸಾಂದರ್ಭಿಕ ಚಿತ್ರ   

ಬೆಂಗಳೂರು: ಕ್ರಿಸ್‌ಮಸ್‌ ರಜೆಗೆ ಕೆಎಸ್‌ಆರ್‌ಟಿಸಿಯಿಂದ ಒಂದು ಸಾವಿರ ಹೆಚ್ಚುವರಿ ಬಸ್‌ ಸೇವೆ ಕಲ್ಪಿಸಲಾಗಿದೆ. ಡಿ.22ರಿಂದ (ಶುಕ್ರವಾರ) ಡಿ.24ರ ವರೆಗೆ (ಭಾನುವಾರ) ನಗರದ ವಿವಿಧ ಬಸ್‌ ನಿಲ್ದಾಣಗಳಿಂದ ಈ ಹೆಚ್ಚುವರಿ ಬಸ್‌ ಸೇವೆ ಒದಗಿಸಲಾಗು‌ತ್ತಿದೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ಗೆ ಬಸ್‌ ತೆರಳಲಿವೆ.

ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಹೆಚ್ಚುವರಿ ಬಸ್‌ ಹೊರಡಲಿವೆ.

ADVERTISEMENT

ಶಾಂತಿನಗರದ ಬಸ್‌ ನಿಲ್ದಾಣದಿಂದ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್‌, ವಿಜಯವಾಡ, ಹೈದರಾಬಾದ್ ಸೇರಿದಂತೆ ತಮಿಳುನಾಡು ಹಾಗೂ ಆಂಧ್ರಪ್ರದೇಶ, ತೆಲಂಗಾಣಕ್ಕೆ ಬಸ್‌ಗಳು ತೆರಳಿವೆ.

ಡಿ.25ರಂದು ಮತ್ತಷ್ಟು ವಿಶೇಷ ಬಸ್‌ಗಳು ಸಂಚರಿಸಲಿವೆ. ಸಂಸ್ಥೆಯ ವೆಬ್‌ಸೈಟ್‌ www.ksrtc.karnataka.gov.in ಮೂಲಕ ಆಸನಗಳನ್ನು ಕಾಯ್ದಿರಿಸಬಹುದು.

ನಾಲ್ಕು ಅಥವಾ ಹೆಚ್ಚು ಜನರ ಪ್ರಯಾಣದ ಟಿಕೆಟ್‌ ಬುಕ್ಕಿಂಗ್‌ ಮೇಲೆ ಶೇ 5ರಷ್ಟು ಹಾಗೂ ಹೋಗಿ ಬರುವ ಟಿಕೆಟ್‌ಗಳನ್ನು ಒಮ್ಮೆಲೇ ಬುಕ್‌ ಮಾಡಿದರೆ ಬರುವ ಪ್ರಯಾಣದ ಟಿಕೆಟ್‌ ಮೇಲೆ ಶೇ 10ರಷ್ಟು ರಿಯಾಯಿತಿ ಸಿಗಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.