
ಬೆಂಗಳೂರು: ಕೆಎಸ್‌ಆರ್‌ಟಿಸಿ ತರಬೇತಿ ಕೇಂದ್ರಗಳಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಭಾರಿ ವಾಹನ ಚಾಲನಾ ತರಬೇತಿಯನ್ನು ಹಮ್ಮಿಕೊಂಡಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಪಿಎಂ–ಅಜಯ್ ಯೋಜನೆಯಡಿ ಈ ತರಬೇತಿ ನೀಡಲಾಗುತ್ತಿದೆ. ಕೆಎಸ್‌ಆರ್‌ಟಿಸಿಯ ಮಾಲೂರು, ಮಳವಳ್ಳಿ, ಹಾಸನ, ಚಿಕ್ಕಮಗಳೂರು ಹಾಗೂ ಹೊಳಲ್ಕೆರೆ ತರಬೇತಿ ಕೇಂದ್ರಗಳಲ್ಲಿ ಚಾಲನಾ ತರಬೇತಿ ನಡೆಯಲಿದೆ.
45 ವರ್ಷದೊಳಗಿನ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಒಂದು ತಿಂಗಳ ತರಬೇತಿ ಇದಾಗಿದ್ದು, ವಸತಿ ಮತ್ತು ಊಟ ಉಚಿತವಾಗಿ ಒದಗಿಸಲಾಗುವುದು. ತರಬೇತಿ ಪೂರ್ಣಗೊಳಿಸಿದವರಿಗೆ ಸಾರಿಗೆ ಇಲಾಖೆಯ ಸಹಯೋಗದಲ್ಲಿ ಪರವಾನಗಿ ಉಚಿತವಾಗಿ ನೀಡಲಾಗುವುದು.
ಅಭ್ಯರ್ಥಿಗಳು ಹತ್ತಿರದ ತರಬೇತಿ ಕೇಂದ್ರದಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಇಲ್ಲವೇ ksrtcjobs.karnataka.gov.inನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿವರ ಭರ್ತಿ ಮಾಡಿದವರನ್ನು ಕಚೇರಿಯಿಂದಲೇ ಸಂಪರ್ಕಿಸಲಾಗುವುದು, ಮಾಹಿತಿಗೆ ಮಾಲೂರು: 7760994432, ಚಿಕ್ಕಮಗಳೂರು: 9606037746, ಮಳವಳ್ಳಿ: 7760990137, ಹಾಸನ: 7760990533, ಹೊಳಲ್ಕೆರೆ: 7019072560 ಸಂಪರ್ಕಿಸಬಹುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.