ADVERTISEMENT

ಕೆಎಸ್‌ಆರ್‌ಟಿಸಿ ಆದೇಶ ನಕಲಿ:ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 5:13 IST
Last Updated 1 ಜುಲೈ 2020, 5:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಸಹಾಯಕ ತಾಂತ್ರಿಕ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನಿಯೋಜನೆ ಕುರಿತು ನಕಲಿ ಆದೇಶವೊಂದು ವಾಟ್ಸ್‌ ಆ್ಯಪ್‌ನಲ್ಲಿ ಹರಿದಾಡುತ್ತಿದೆ. ಈ ರೀತಿಯ ಯಾವುದೇ ಆದೇಶ ಹೊರಡಿಸಿಲ್ಲ ಎಂದುನಿಗಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಿಗಮದ ತಾಂತ್ರಿಕ ಸಹಾಯಕ ಹುದ್ದೆಗಳು ಹಾಗೂ ಕಾನ್‌ಸ್ಟೇಬಲ್‌ ಹುದ್ದೆಗಳ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನಿಗಮದಿಂದ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ. ಯಾರಾದರೂ ಹುದ್ದೆ ಕೊಡಿಸುವ ಆಮಿಷವೊಡ್ಡಿದ್ದಲ್ಲಿ 7760990051 ಸಂಖ್ಯೆಗೆ ದೂರು ನೀಡಬಹುದು.

ಬೆಳೆ ವಿಮೆಗೆ ನೋಂದಣಿಗೆ ಅರ್ಜಿ ಆಹ್ವಾನ

ADVERTISEMENT

ಬೆಂಗಳೂರು: ತೋಟಗಾರಿಕೆ ಇಲಾಖೆಯ 2020-21ನೇ ಸಾಲಿನ ಬೆಳೆ ವಿಮಾ ಯೋಜನೆಗೆ ರೈತರು ಜುಲೈ 31ರೊಳಗೆ ನೋಂದಾಯಿಸಿಕೊಳ್ಳಬೇಕು.

ನಗರ ಜಿಲ್ಲಾ ವ್ಯಾಪ್ತಿಯ ಮಾವು ಬೆಳೆಗಾರರು, ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದ ರೈತರು ನೋಂದಾಯಿಸಿಕೊಳ್ಳಬಹುದು.

ಸಂಪರ್ಕ: 080-27840454 (ಆನೇಕಲ್), 080-28566740 (ಬೆಂಗಳೂರು ಉತ್ತರ), 080-28486144 (ಬೆಂಗಳೂರು ದಕ್ಷಿಣ), 080-28486144 (ಬೆಂಗಳೂರು ಪೂರ್ವ).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.