ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನಾಲ್ಕು ನಿಗಮಗಳಲ್ಲಿ ಕಾರ್ಯನಿರ್ಹಿಸು ತ್ತಿರುವ ನೌಕರರ 38 ತಿಂಗಳ ಬಾಕಿ ವೇತನ ನೀಡಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಆಗ್ರಹಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಮಿತಿಯ ಅಧ್ಯಕ್ಷ ಮನು ಬಳಿಗಾರ್, ‘ಸಾರಿಗೆ ನೌಕರರ ವೇತನ ಪರಿಷ್ಕರಣೆಯಾದ 2020ರ ಜನವರಿ 1ಕ್ಕೆ ಅನ್ವಯ ವಾಗುವಂತೆ 38 ತಿಂಗಳ ಬಾಕಿ ವೇತನ ಪಾವತಿಸಬೇಕು.
2024ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆಯನ್ನು ತಕ್ಷಣ ಜಾರಿಗೊಳಿಸಬೇಕು. ಇತರೆ ಇಲಾಖೆಗಳಿಗೆ ಹೋಲಿಸಿದರೆ ಸಾರಿಗೆ ಸಂಸ್ಥೆ ನೌಕರರ ವೇತನ ಕಡಿಮೆ ಇದೆ. ದಿನಬಳಕೆ ವಸ್ತುಗಳ ದರ ಹೆಚ್ಚಳವಾಗಿದ್ದು, ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಆದ್ದರಿಂದ ಕೂಡಲೇ 38 ತಿಂಗಳ ಹಿಂಬಾಕಿ ನೀಡಬೇಕು ಹಾಗೂ ವೇತನ ಪರಿಷ್ಕರಣೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.