
ಬೆಂಗಳೂರು: ಕೆಎಸ್ಆರ್‌ಟಿಸಿ–ಸಾರಿಗೆ ಮಿತ್ರ ಎಚ್‌ಆರ್‌ಎಂಎಸ್–2.0 ಮೊಬೈಲ್ ಆ್ಯಪ್ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗುರುವಾರ ಬಿಡುಗಡೆ ಮಾಡಿದರು.
ಡಿಜಿಟಲ್ ಪರಿವರ್ತನೆ, ಪಾರದರ್ಶಕತೆ, ಕಾರ್ಯಕ್ಷಮತೆ ವೃದ್ಧಿಗೊಳಿಸಲು ಮತ್ತು ನೌಕರರ ಕಲ್ಯಾಣದ ಬಗ್ಗೆ ಕೇಂದ್ರೀಕರಿಸಿ ಹೊಸ ಆ್ಯಪ್ ಅನ್ನು ಹೊಸ ವರ್ಷದ ಮೊದಲ ದಿನ ಬಿಡುಗಡೆ ಮಾಡಲಾಗಿದೆ. ತ್ವರಿತವಾಗಿ ಮಾನವ ಸಂಪನ್ಮೂಲ ಸೇವೆಗಳನ್ನು ಸ್ಮಾರ್ಟ್ ಫೋನ್ ಮೂಲಕ ಒದಗಿಸುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು.
ವೈಶಿಷ್ಟ್ಯಗಳು: ಜಿಯೋ–ಫೆನ್ಸಿಂಗ್ ಆಧಾರಿತ ಹಾಜರಾತಿ ವ್ಯವಸ್ಥೆ, ಮಾಸಿಕ ಹಾಜರಾತಿ ವೀಕ್ಷಣೆ, ವೈಯಕ್ತಿಕ ವಿವರ, ಸೇವಾ ದಾಖಲಾತಿ (ಸರ್ವಿಸ್ ರಿಜಿಸ್ಟರ್) ವಿವರ, ಕುಟುಂಬ ಸದಸ್ಯರ ಮಾಹಿತಿ ಹಾಗೂ ನಾಮನಿರ್ದೇಶಿತ (ನಾಮಿನಿ) ವಿವರಗಳು ಇದರಲ್ಲಿವೆ. ಮಾಸಿಕ ವೇತನ ಪಟ್ಟಿ (ಪೇ ಸ್ಲಿಪ್) ಒಂದೇ ಕ್ಲಿಕ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ರಜೆ ನಿರ್ವಹಣಾ ವ್ಯವಸ್ಥೆ ಮೂಲಕ ಖಾತೆಯಲ್ಲಿರುವ ರಜೆ ವಿವರಗಳ ಪರಿಶೀಲನೆ, ಆಂತರಿಕ ಸಂವಹನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ, ನಿಗಮದ ವಿವಿಧ ವಿಭಾಗಗಳಿಂದ ಹೊರಡಿಸಲಾಗುವ ಸುತ್ತೋಲೆ ವಿವರ ಲಭ್ಯ ಇರಲಿದೆ.
ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕಿ ನಂದಿನಿ ದೇವಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.