ಬಸ್
– ಪ್ರಜಾವಾಣಿ ಚಿತ್ರ
ಬೆಂಗಳೂರು: ಕೇರಳದಲ್ಲಿ ಸೆಪ್ಟೆಂಬರ್ 5ರಂದು ತಿರು ಓಣಂ ಹಬ್ಬದ ಆಚರಣೆ ಇರುವ ಪ್ರಯುಕ್ತ ಬೆಂಗಳೂರಿನಿಂದ ಕೇರಳದ ವಿವಿಧ ಪ್ರದೇಶಗಳಿಗೆ ಕೆಎಸ್‌ಆರ್‌ಟಿಸಿಯ 90 ವಿಶೇಷ ಬಸ್‌ಗಳು ಸೆ.2ರಿಂದ ಸಂಚರಿಸಲಿವೆ.
ಸೆಪ್ಟೆಂಬರ್ 2ರಿಂದ 4ರವರೆಗೆ ಬೆಂಗಳೂರಿನಿಂದ ಕೇರಳಕ್ಕೆ ಹಾಗೂ ಸೆ. 7ರಂದು ಕೇರಳದಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳ ವ್ಯವಸ್ಥೆ ಇರಲಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕಣ್ಣೂರು, ಕೋಯಿಕ್ಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೋಟಯಂ, ತಿರುವನಂತಪುರಂ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.
ಸಾರ್ವಜನಿಕರಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. www.ksrtc.karnataka.gov.in ವೆಬ್‌ಸೈಟ್ ಮೂಲಕ ಇ-ಟಿಕೆಟ್ ಬುಕಿಂಗ್ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ದೊರೆಯಲಿದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.