ADVERTISEMENT

ಬೆಂಗಳೂರು | ಸೆ.29ರಿಂದ ಕುಲಾಂತರಿ ಆಹಾರ ವಿರೋಧಿಸಿ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2024, 14:43 IST
Last Updated 25 ಸೆಪ್ಟೆಂಬರ್ 2024, 14:43 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಕುಲಾಂತರಿ ಆಹಾರ ವಿರೋಧಿ ಒಕ್ಕೂಟದಿಂದ ಸೆಪ್ಟೆಂಬರ್‌ 29ರಿಂದ ಅಕ್ಟೋಬರ್‌ 2ರವರೆಗೂ ತುಮಕೂರು ಜಿಲ್ಲೆಯ ದೊಡ್ಡ ಹೊಸೂರಿನ ಗಾಂಧೀಜಿ ಸಹಜ ಬೇಸಾಯ ಆಶ್ರಮದಲ್ಲಿ ಕುಲಾಂತರಿ ಆಹಾರ ಮತ್ತು ಬಹು ರಾಷ್ಟ್ರೀಯ ಕಂಪನಿಗಳನ್ನು ಕೃಷಿ ಕ್ಷೇತ್ರದಿಂದ ಬಹಿಷ್ಕರಿಸುವಂತೆ ಆಗ್ರಹಿಸಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು’ ಎಂದು ಆಶ್ರಮದ ಸಂಸ್ಥಾಪಕ ಎಚ್. ಮಂಜುನಾಥ್‌ ಹೇಳಿದರು. 

ADVERTISEMENT

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕುಲಾಂತರಿ ತಳಿಯ ಬೆಳೆಗಳಿಗೆ ಸಂಬಂಧಿಸಿದಂತೆ ನಾಲ್ಕು ತಿಂಗಳಲ್ಲಿ ಕಾಯ್ದೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ನಮ್ಮ ದೇಶಿ ಕೃಷಿ ಪದ್ಧತಿಗೆ, ಬೀಜ ಸ್ವಾವಲಂಬನೆಗೆ ಮಾರಕವಾಗಿರುವ ಈ ಕಾಯ್ದೆಯನ್ನು ಕೇಂದ್ರವೂ ರೂಪಿಸಬಾರದು. ರಾಜ್ಯ ಸರ್ಕಾರ ಕೂಡ ಕುಲಾಂತರಿ ಮುಕ್ತ ಕರ್ನಾಟಕ ಎಂಬುದಾಗಿ ಘೋಷಿಸಬೇಕು’ ಎಂದು ಆಗ್ರಹಿಸಿದರು.

‘ಕೇಂದ್ರ ಸರ್ಕಾರವೂ ಕುಲಾಂತರಿಗೆ ಸಂಬಂಧಿಸಿದಂತೆ ಸಂಶೋಧನೆ ನಡೆಸುವುದನ್ನು ನಿಲ್ಲಿಸಬೇಕು. ಇದಕ್ಕಾಗಿ ಹಣಕಾಸು ಪೂರೈಕೆ ಮಾಡುವುದನ್ನು ಹಾಗೂ ಈ ಕ್ಷೇತ್ರಕ್ಕೆ ಹೊರದೇಶದಿಂದ ಬರುತ್ತಿರುವ ಹಣವನ್ನೂ ತಡೆಯುವಂತೆ ಸತ್ಯಾಗ್ರಹದಲ್ಲಿ ಒತ್ತಾಯಿಸಲಾಗುವುದು’ ಎಂದರು.

‘ತುಮಕೂರಿನ ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮಿಜಿ ಅವರು ಸತ್ಯಾಗ್ರಹಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ಹೇಳಿದರು. 

ಪರಿಸರ ಕಾರ್ಯಕರ್ತ ಸುರೇಶ್ ಹೆಬ್ಳೀಕರ್, ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಮಾಧವನ್, ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.