ADVERTISEMENT

ಕುಮಾರಸ್ವಾಮಿ ಹೆಸರು ಇಂದು ಘೋಷಣೆ?

​ಪ್ರಜಾವಾಣಿ ವಾರ್ತೆ
Published 4 ಜುಲೈ 2019, 4:33 IST
Last Updated 4 ಜುಲೈ 2019, 4:33 IST
ಎಚ್.ಕೆ. ಕುಮಾರಸ್ವಾಮಿ,
ಎಚ್.ಕೆ. ಕುಮಾರಸ್ವಾಮಿ,   

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿ ಸಕಲೇಶಪುರದ ಶಾಸಕಎಚ್‌.ಕೆ.ಕುಮಾರಸ್ವಾಮಿ ಅವರ ನೇಮಕ ಬಹುತೇಕ ಖಚಿತವಾಗಿದ್ದು, ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಗುರುವಾರ ಅದನ್ನು ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆ ಇದೆ.

ಈ ಮಧ್ಯೆ, ಇದೇ 27ರಂದು ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪಕ್ಷದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಮತ್ತೊಂದೆಡೆ ಪಕ್ಷದ ಸಾಮಾಜಿಕ ಜಾಲತಾಣವನ್ನು ನಿರ್ವಹಿಸಲು ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT