ADVERTISEMENT

ಕುಂಬಾರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 3 ಜೂನ್ 2024, 16:12 IST
Last Updated 3 ಜೂನ್ 2024, 16:12 IST
   

ಬೆಂಗಳೂರು: ಕುಂಬಾರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2023–24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕಗಳಿಸಿದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಕುಂಬಾರ ಜನಾಂಗದ ವಿದ್ಯಾರ್ಥಿಗಳು ಜೂ. 15ರೊಳಗೆ ಅರ್ಜಿ ಸಲ್ಲಿಸಬಹುದು.

ಜೂ. 26ರಂದು ಬೆಂಗಳೂರಿನ ಕಲಾಸಿಪಾಳ್ಯದಲ್ಲಿರುವ ಕುಂಬಾರ ಸಂಘದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರವನ್ನು ವಿತರಣೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಮಾಹಿತಿ: 6362619669, 080–26705264ಗೆ ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.