ADVERTISEMENT

ಕುಂಬಾರ ಅಭಿವೃದ್ಧಿ ನಿಗಮಕ್ಕೆ ಸ್ವತಂತ್ರ ಸ್ಥಾನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2022, 20:55 IST
Last Updated 23 ಜುಲೈ 2022, 20:55 IST
ಬೆಂಗಳೂರಿನಲ್ಲಿ ಶನಿವಾರ ಕರ್ನಾಟಕ ಕುಂಬಾರರ ಯುವ ಸೈನ್ಯ ಹಮ್ಮಿಕೊಂಡಿದ್ದ ಕುಂಬಾರ, ಕುಲಾಲ, ಪ್ರಜಾಪತಿ ಜಾಗೃತಿ ಸಮಾವೇಶವನ್ನು ಶಾಸಕ ಕೆ.ಎಸ್‌.ಈಶ್ವರಪ್ಪ ಉದ್ಘಾಟಿಸಿದರು. ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಕರ್ನಾಟಕ ಕುಂಬಾರರ ಯುವ ಸೈನ್ಯ ಹಮ್ಮಿಕೊಂಡಿದ್ದ ಕುಂಬಾರ, ಕುಲಾಲ, ಪ್ರಜಾಪತಿ ಜಾಗೃತಿ ಸಮಾವೇಶವನ್ನು ಶಾಸಕ ಕೆ.ಎಸ್‌.ಈಶ್ವರಪ್ಪ ಉದ್ಘಾಟಿಸಿದರು. ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದ್ದಾರೆ.   

ಬೆಂಗಳೂರು: ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧೀನದಲ್ಲಿರುವ ಕುಂಬಾರ ಅಭಿವೃದ್ಧಿ ನಿಗಮಕ್ಕೆ ಪ್ರತ್ಯೇಕ ಕಚೇರಿ, ಅನುದಾನ ಒದಗಿಸುವ ಜತೆಗೆ, ಅಧ್ಯಕ್ಷರನ್ನೂ ನೇಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.

ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಶನಿವಾರಕರ್ನಾಟಕ ಕುಂಬಾರರ ಯುವ ಸೈನ್ಯ ಹಮ್ಮಿಕೊಂಡಿದ್ದಕುಂಬಾರ, ಕುಲಾಲ, ಪ್ರಜಾಪತಿ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಮಣ್ಣಿನ ಮಡಕೆ ಮಾರಾಟ ಮಾಡಿ ಜೀವನ ಸಾಗಿಸುವ ಕುಂಬಾರ ಸಮುದಾಯ ಆಧುನಿಕ ಕಾಲಘಟ್ಟದಲ್ಲಿ ಸಾಕಷ್ಟು ಸಂಕಷ್ಟ ಅನುಭವಿ
ಸುತ್ತಿದೆ. ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ.
ಈ ಕುರಿತು ಮುಖ್ಯಮಂತ್ರಿ ಜತೆ ಸಭೆ ನಡೆಸಿ, ಒಂದು ವಾರದಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.

ADVERTISEMENT

ಶಾಸಕ ಕೆ.ಎಸ್.ಈಶ್ವರಪ್ಪ ಮಾತನಾಡಿ, ಸಂಕಷ್ಟದಲ್ಲಿರುವ ಕುಂಬಾರ ಸಮುದಾಯ ಅಭಿವೃದ್ಧಿ ಕಾಣಬೇಕಾದರೆ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು.ಕುಂಬಾರಿಕೆಗೆ ಅಗತ್ಯವಾದ ಸಾಲ ಸೌಲಭ್ಯ ದೊರಕಿಸುವುದು, ಸಬ್ಸಿಡಿ ನೀಡುವುದು, ಕುಂಬಾರಿಕೆ ಸಾಮಗ್ರಿಗಳಿಗೆ ಸೂಕ್ತ ಮಾರುಕಟ್ಟೆ ದೊರಕಿಸಲು ಪ್ರಯತ್ನಿಸಲಾಗುವುದು ಎಂದರು.

ಕುಂಬಾರ ಮಠದ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ತೇಲಸಂಗ ಶ್ರೀ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರ್ ಶೆಟ್ಟಿ ಕುಂಬಾರ
ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.