ADVERTISEMENT

ಮಹಾಕುಂಭ ಮೇಳದ ಲೋಗೊ ಬಿಡುಗಡೆ 

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 21:17 IST
Last Updated 7 ಅಕ್ಟೋಬರ್ 2022, 21:17 IST
ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾ ಕುಂಭಮೇಳದ ಲೋಗೊ ಬಿಡುಗಡೆ ಮಾಡಿದರು. ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ, ಸಚಿವ ‌ಡಾ.ನಾರಾಯಣಗೌಡ, ಶಾಸಕ ನಾಗೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಇದ್ದಾರೆ.

ಬೆಂಗಳೂರು: ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳದ ಲೋಗೊವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬಿಡುಗಡೆ ಮಾಡಿದರು.

ಕೆ.ಆರ್.ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ-ಹೇಮಾವತಿ-ಲಕ್ಷ್ಮಣ ತೀರ್ಥಗಳ ಸಮಾಗಮ ಸ್ಥಳ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಬಾಮೇಳ ಅ.13ರಿಂದ 16ರವರೆಗೆ ನಡೆಯಲಿದೆ.

ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಬರುತ್ತಾರೆ. ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ADVERTISEMENT

ಸಚಿವ ‌ಡಾ.ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ, ಶಾಸಕ ನಾಗೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.