
ಪ್ರಜಾವಾಣಿ ವಾರ್ತೆಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ 15 ಮಂದಿ ಸಜೀವ ದಹನವಾಗಿದ್ದು, ಸ್ಥಳಕ್ಕೆ ರಾಜ್ಯದ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ತಂಡ ತೆರಳಿದೆ.
ಸ್ಥಳಕ್ಕೆ ತೆರಳಿ ಕನ್ನಡಿಗರು ಯಾರಾದರೂ ಅಪಾಯಕ್ಕೆ ಸಿಲುಕಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ನೆರವಾಗುವಂತೆ ಬಾಗೇಪಲ್ಲಿ ಅಧಿಕಾರಿಗಳಿಗೆ ಸೂಚಿಸಿಲಾಗಿದೆ. ಅವರು ಬೆಳಿಗ್ಗೆಯೇ ಸ್ಥಳಕ್ಕೆ ತೆರಳಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.
ಬೆಂಕಿಗೆ ಆಹುತಿಯಾಗಿರುವ ಬಸ್ ದೇಶದಾದ್ಯಂತ ಸಂಚರಿಸುವ ಪರ್ಮಿಟ್ ಹೊಂದಿತ್ತು ಎಂಬುದು ತಿಳಿದುಬಂದಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.