ADVERTISEMENT

ಎಸ್.ಟಿ ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯದವರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 6:41 IST
Last Updated 21 ನವೆಂಬರ್ 2022, 6:41 IST
   

ಬೆಂಗಳೂರು: 'ಎಸ್.ಟಿ ಮೀಸಲಾತಿ ನೀಡಬೇಕು' ಎಂದು ಆಗ್ರಹಿಸಿ ಕುರುಬ ಸಮುದಾಯದವರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಉದ್ಯಾನಕ್ಕೆ ಆಗಮಿಸಿರುವ ಸಮುದಾಯದ ಜನ, 'ಎಸ್.ಟಿ ಮೀಸಲಾತಿ ಬೇಕು' ಎಂದು ಘೋಷಣೆ ಕೂಗುತ್ತಿದ್ದಾರೆ.
ಕುರುಬ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಾಲುಮತ ಮಹಾಸಭಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
'ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡುವ ಸಂಬಂಧ ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರವು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಇದುವರೆಗೂ ಅಂಗೀಕರಿಸಿಲ್ಲ' ಎಂದು ಪ್ರತಿಭಟನಾಕಾರರು ದೂರಿದರು.

'ಅಧ್ಯಯನ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು' ಎಂದು ಆಗ್ರಹಿಸಿದರು.

ADVERTISEMENT

'ಎಸ್.ಟಿ ಮೀಸಲಾತಿ ಸಂಬಂಧ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯವ್ಯಾಪಿ ಪಾದಯಾತ್ರೆ ಸಹ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ಮಾತ್ರ ನೀಡುತ್ತಿದ್ದಾರೆ. ಬೇಡಿಕೆ ಈಡೇರಿಸಿಲ್ಲ. ಕೂಡಲೇ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ, ಗಂಭೀರ ಹೋರಾಟ ನಡೆಸಬೇಕಾಗುತ್ತದೆ' ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.