ADVERTISEMENT

ಸಿಪಿಐ ಇಲ್ಲಾಳ ಮೇಲೆ ಹಲ್ಲೆ ಖಂಡಿಸಿ ಕುರುಬ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 12:42 IST
Last Updated 24 ಸೆಪ್ಟೆಂಬರ್ 2022, 12:42 IST
   

ಕಮಲಾಪುರ (ಕಲಬುರಗಿ ಜಿಲ್ಲೆ):ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆಗೆ ತೆರಳಿದ್ದ ಸಿಪಿಐ ಶ್ರೀಮಂತ ಇಲ್ಲಾಳ ಅವರ ಮೇಲಿನ ಹಲ್ಲೆ ಖಂಡಿಸಿ ಮುಖಂಡ ಗುರುನಾಥ ಪೂಜಾರಿ ನೇತೃತ್ವದಲ್ಲಿ ಶನಿವಾರ ಕಲಬುರಗಿಯ ಖಾಸಗಿ ಆಸ್ಪತ್ರೆ ಎದುರು ಕುರುಬ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಪಿಐ ಶ್ರೀಮಂತ ಇಲ್ಲಾಳ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಬೇಕು. ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಘಟನೆ ನಡೆದ ಸ್ಥಳ ನಿಖರತೆ ಇಲ್ಲ. ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿರುವುದರಿಂದ ಯಾವ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕೆಂಬ ದ್ವಂದ್ವ ಉಂಟಾಗುತ್ತಿದೆ. ಮಹಾರಾಷ್ಟ್ರದಲ್ಲಿ ಉಮರ್ಗಾ ಠಾಣೆ, ಕರ್ನಾಟಕದಲ್ಲಿ ಮಂಠಾಳ ಠಾಣೆಯ ಸರಹದ್ದಿಗೆ ಒಳಪಡುತ್ತದೆ.
ಕೂಡಲೆ ನಿರ್ಣಯ ಕೈಗೊಂಡು ಪ್ರಕರಣ ದಾಖಲಿಸಬೇಕು. ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.