ADVERTISEMENT

ಬಣರಹಿತವಾಗಿ ಕುರುಬರ ಅಭಿವೃದ್ಧಿ: ಜಿ. ಕೃಷ್ಣ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 19:28 IST
Last Updated 27 ಜೂನ್ 2020, 19:28 IST

ಬೆಂಗಳೂರು: ‘ಕುರುಬರ ಸಂಘದಲ್ಲಿ ಬಣಗಳನ್ನು ಹುಟ್ಟುಹಾಕದೆ ಭಿನ್ನಾಭಿಪ್ರಾಯರಹಿತವಾಗಿ ಸಮಾಜದ ಏಳಿಗೆಗಾಗಿ ಕೆಲಸ ಮಾಡುತ್ತೇವೆ’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ನೂತನ ಅಧ್ಯಕ್ಷ ಜಿ. ಕೃಷ್ಣ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿ ಕುರುಬ ಸಮಾಜದ ಶಾಲೆ,ಕಾಲೇಜುಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು. ರಾಜ್ಯದ ಎಲ್ಲಾ ತಾಲ್ಲೂಕುಗಳಿಗೆ ತೆರಳಿಸಂಘದ ಚಟುವಟಿಕೆ ಚುರುಕುಗೊಳಿಸಲಾಗುವುದು’ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿಡಿ.ವೆಂಕಟೇಶಮೂರ್ತಿ, ‘ಚುನಾವಣೆ ತನಕ ಸಂಘದಲ್ಲಿ ಬಣಗಳು ಇರುವುದು ಸಹಜ. ಸಮಾಜ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಒಟ್ಟಾಗಿ ಮುಂದುವರಿಯುವ ಆಗತ್ಯವಿದ್ದು,ನಮ್ಮಲ್ಲಿ ಯಾವುದೇ ರೀತಿಯ ಬಣವಿಲ್ಲ.ಎಲ್ಲ ನಾಯಕರ ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ’ ಎಂದರು.

ADVERTISEMENT

ಈ ಹಿಂದಿನ ಕಾರ್ಯಾಧ್ಯಕ್ಷ ಶಾಂತಪ್ಪ, ‘ಕುರುಬ ಸಮಾಜ ಒಂದು ಪಕ್ಷಕ್ಕೆ ಸೀಮಿತಗೊಳ್ಳದೆ ಎಲ್ಲಾ ಪಕ್ಷದ ಜತೆ ಸಮನ್ವಯ ಕಾಪಾಡಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.