ADVERTISEMENT

ಕುವೆಂಪು ಅವರ 117ನೇ ಜನ್ಮ ದಿನಾಚರಣೆ: ‘ಜಾತಿಗೆ ನಿಲುಕದ ವಿಶ್ವಮಾನವ’

ಗಮನ ಸೆಳೆದ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 20:03 IST
Last Updated 24 ಡಿಸೆಂಬರ್ 2020, 20:03 IST
ಕಾರ್ಯಕ್ರಮವನ್ನು ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು
ಕಾರ್ಯಕ್ರಮವನ್ನು ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು   

ರಾಮನಗರ: ವಿಶ್ವಮಾನವ ಕುವೆಂಪು ವಿಚಾರಧಾರೆಗಳು ಮನುಷ್ಯರ ಮನಸ್ಸಿನಲ್ಲಿರುವ ಕ್ಲೇಶಗಳನ್ನು ತೊಳೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಪೀಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಗುರುವಾರ ಅಭಿಪ್ರಾಯಪಟ್ಟರು.

ನಗರದಲ್ಲಿ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ವತಿಯಿಂದ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಅವರ 117ನೇ ಜನ್ಮ ದಿನಾಚರಣೆಯಲ್ಲಿ ಅವರು ಆಶೀರ್ವಚನ ನೀಡಿದರು.

ಕುವೆಂಪು ಯಾವುದೇ ಜಾತಿಗೆ ಸೇರಿದವರಲ್ಲದವರು. ವೈಚಾರಿಕ ಪ್ರಜ್ಞೆಯೊಂದಿಗೆ ಪೂರ್ಣ ಅರಳಿದ ಬದುಕು ಅವರದಾಗಿತ್ತು. ಅನುಭವದ ಆಳಕ್ಕೆ ಇಳಿದು ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರಾಗಿ ಉಳಿದದರು. ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದುಕೊಂಡಿರುವ ಇಂತಹ ಮಹಾನ್ ಸಂತನನ್ನು ನೆನೆಯುವುದೇ ನಮ್ಮೆಲ್ಲರ ಭಾಗ್ಯ ಎಂದು ಸ್ಮರಿಸಿದರು.

ADVERTISEMENT

ಯಾವ ವ್ಯಕ್ತಿ ಎಲ್ಲಿ ಹೋದರು, ದೈವತ್ವದ ದೃಷ್ಟಿಯಿರಿಸಿಕೊಂಡಿರುತ್ತಾನೋ ಆತ ಮಾತ್ರ ವಿಶ್ವಮಾನವನಾಗಲು ಸಾಧ್ಯ. ಅಂತಹ ವ್ಯಕ್ತಿತ್ವ ಕುವೆಂಪು ಅವರಲ್ಲಿ ಇತ್ತು ಎಂದು ಹೇಳಿದರು.

ಸಾಹಿತಿ ಡಾ.ಬೈರಮಂಗಲ ರಾಮೇಗೌಡ ‘ಕುವೆಂಪು ರಾಮಾಯಣ ದರ್ಶನಂ’ ಕುರಿತು ವಿಷಯ ಮಂಡನೆ ಮಾಡಿದರು.

ಕುವೆಂಪು ಸಾಹಿತ್ಯದಲ್ಲಿ ವೈಚಾರಿಕತೆ ಬಗ್ಗೆ ಸಾಹಿತಿ ಎಲ್.ಎನ್. ಮುಕುಂದರಾಜ್, ಕುವೆಂಪು ಕಾವ್ಯಗಳ ಶ್ರೀಮಂತಿಕೆ ಬಗ್ಗೆ ವಿಚಾರ ಬಗ್ಗೆ ಪ್ರೊ.ಚಂದ್ರಶೇಖರ ನಂಗಲಿ ವಿಷಯ ಮಂಡನೆ ಮಾಡಿದರು.

ಅರ್ಚಕರಹಳ್ಳಿ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.