ADVERTISEMENT

ಕುವೆಂಪು ವೈಜ್ಞಾನಿಕ ಚಿಂತನೆ ಪಸರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2024, 15:15 IST
Last Updated 29 ಡಿಸೆಂಬರ್ 2024, 15:15 IST
ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮ ದಿನದ ಅಂಗವಾಗಿ ನಗರದ ಮಲ್ಲೇಶ್ವರ ವೃತ್ತದಲ್ಲಿರುವ ರಾಷ್ಟ್ರಕವಿ ಕುವೆಂಪು ಪ್ರತಿಮೆಗೆ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಲಾರ್ಪಣೆ ಮಾಡಿ, ಕನ್ನಡ ಅಂಕೆಗಳು ಮತ್ತು ಕನ್ನಡದ ಮಾಹಿತಿಯಿರುವ ಕನ್ನಡ ದಿನದರ್ಶಿಕೆಯನ್ನು ಬಿಡುಗಡೆ ಮಾಡಿದರು.
ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮ ದಿನದ ಅಂಗವಾಗಿ ನಗರದ ಮಲ್ಲೇಶ್ವರ ವೃತ್ತದಲ್ಲಿರುವ ರಾಷ್ಟ್ರಕವಿ ಕುವೆಂಪು ಪ್ರತಿಮೆಗೆ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಲಾರ್ಪಣೆ ಮಾಡಿ, ಕನ್ನಡ ಅಂಕೆಗಳು ಮತ್ತು ಕನ್ನಡದ ಮಾಹಿತಿಯಿರುವ ಕನ್ನಡ ದಿನದರ್ಶಿಕೆಯನ್ನು ಬಿಡುಗಡೆ ಮಾಡಿದರು.   

ಬೆಂಗಳೂರು: ‘ರಾಷ್ಟ್ರಕವಿ ಕುವೆಂಪು ಅವರ ವೈಜ್ಞಾನಿಕ ಚಿಂತನೆಗಳು ನಮ್ಮ ಶಿಕ್ಷಣದಲ್ಲಿ ಪಠ್ಯವಾಗಬೇಕು ಮತ್ತು ಅವುಗಳನ್ನು ಹೆಚ್ಚು ಪ್ರಚಾರ ಮಾಡಬೇಕು’ ಎಂದು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭಾನುವಾರ ಮಲ್ಲೇಶ್ವರದಲ್ಲಿ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಅವರ 120ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ, ಮಲ್ಲೇಶ್ವರ ವೃತ್ತದಲ್ಲಿರುವ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಕನ್ನಡದ ಅಂಕಿಗಳು ಮತ್ತು ಕನ್ನಡದ ಮಹತ್ವದ ವಿಷಯಗಳಿರುವ ಕನ್ನಡದ ದಿನದರ್ಶಿಕೆಯನ್ನು ಅವರು ಬಿಡುಗಡೆ ಮಾಡಿದರು.

’ಕುವೆಂಪು ಅವರ ವೈಚಾರಿಕ ಸಂದೇಶಗಳನ್ನು ಪಸರಿಸಲು ಸಂಘ ಸಂಸ್ಥೆಗಳು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ನಗರ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪ್ರಕಾಶ ಮೂರ್ತಿ ಮಾತನಾಡಿ, ‘ಮನುಜಮತ ವಿಶ್ವಪಥ ಎಂಬ ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಸಾರಿದ ಕುವೆಂಪು ಅವರು, ತಮ್ಮ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳನ್ನು ಮತ್ತು ವೈಚಾರಿಕ ಚಿಂತನೆಗಳನ್ನು ಬಿತ್ತುವ ಮೂಲಕ ಜಗನ್ಮಾನ್ಯ ಸಾಹಿತಿಯಾಗಿದ್ದಾರೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಎಚ್. ಶಿವರಾಮೇಗೌಡ, ಬೆಂಗಳೂರು ನಗರ ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಶ್ರ.ದೇ.ಪಾರ್ಶ್ವನಾಥ, ಹಾಲಿ ಕಾರ್ಯಕಾರಿ ಸಮಿತಿ ಸದಸ್ಯರಾದ ಗೌಡಗೆರೆ ಮಾಯುಶ್ರೀ, ವರ್ಧಮಾನ ಕಳಸೂರು, ಎಂ.ನಾಗೇಶ್, ಮಾಗಡಿ ಗಿರೀಶ್, ಅರವಿಂದ್, ಶಿವಕುಮಾರ್, ವೇಣುಗೋಪಾಲ್ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.