ADVERTISEMENT

ರಾಮ ಮಂದಿರ ನಿರ್ಮಾಣಕ್ಕೆ ಅಡ್ವಾಣಿಯೇ ಕಾರಣ: ಬಿ.ಎಸ್‌. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2024, 15:32 IST
Last Updated 3 ಫೆಬ್ರುವರಿ 2024, 15:32 IST
ಬಿ.ಎಸ್‌. ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ    

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಲು ಬಿಜೆಪಿ ನಾಯಕ ಎಲ್‌.ಕೆ. ಅಡ್ವಾಣಿಯವರೇ ಪ್ರಮುಖ ಕಾರಣ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಅಡ್ವಾಣಿ ಅವರಿಗೆ ಭಾರತ ರತ್ನ ಪುರಸ್ಕಾರ ನೀಡುವ ಕೇಂದ್ರ ಸರ್ಕಾರದ ತೀರ್ಮಾನದ ಕುರಿತು ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನೆಲಸಮಗೊಳಿಸುವ ಹೋರಾಟದಲ್ಲಿ ಅಡ್ವಾಣಿಯವರು ಭಾಗವಹಿಸಿದ್ದರು. ರಾಮ ಮಂದಿರ ನಿರ್ಮಾಣಕ್ಕಾಗಿ ರಥ ಯಾತ್ರೆಯನ್ನೂ ನಡೆಸಿದ್ದರು. ಎರಡೂ ಹೋರಾಟಗಳಲ್ಲಿ ನಾನು ಅವರೊಂದಿಗೆ ಭಾಗವಹಿಸಿದ್ದೆ’ ಎಂದು ಹೇಳಿದರು.

‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸ್ಫೂರ್ತಿ ತುಂಬಿದ್ದ ಅಡ್ವಾಣಿಯವರಿಗೆ ಭಾರತ ರತ್ನ ಪುರಸ್ಕಾರ ನೀಡುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರ ಶ್ಲಾಘನೀಯವಾದುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.