ADVERTISEMENT

ವೆಂಕಟೇಶಪುರ ಕೆರೆ ಪುನಶ್ಚೇತನ

​ಪ್ರಜಾವಾಣಿ ವಾರ್ತೆ
Published 18 ಮೇ 2023, 20:51 IST
Last Updated 18 ಮೇ 2023, 20:51 IST
ಬ್ಯಾಟರಾಯನಪುರ ಕ್ಷೇತ್ರದ ಜಕ್ಕೂರು ವಾರ್ಡ್‌ ವ್ಯಾಪ್ತಿಯ ವೆಂಕಟೇಶಪುರ ಕೆರೆ  ಪ್ರದೇಶಕ್ಕೆ ಶಾಸಕ ಕೃಷ್ಣಬೈರೇಗೌಡ ಭೇಟಿ ನೀಡಿ ಪರಿಶೀಲಿಸಿದರು.
ಬ್ಯಾಟರಾಯನಪುರ ಕ್ಷೇತ್ರದ ಜಕ್ಕೂರು ವಾರ್ಡ್‌ ವ್ಯಾಪ್ತಿಯ ವೆಂಕಟೇಶಪುರ ಕೆರೆ  ಪ್ರದೇಶಕ್ಕೆ ಶಾಸಕ ಕೃಷ್ಣಬೈರೇಗೌಡ ಭೇಟಿ ನೀಡಿ ಪರಿಶೀಲಿಸಿದರು.   

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಜಕ್ಕೂರು ವಾರ್ಡ್‌ ವ್ಯಾಪ್ತಿಯ ವೆಂಕಟೇಶಪುರ ಕೆರೆಯನ್ನು ಪುನಶ್ಚೇತನಗೊಳಿಸಲು ಉದ್ದೇಶಿಸಲಾಗಿದ್ದು, ಶಾಸಕ ಕೃಷ್ಣ ಬೈರೇಗೌಡ ಅವರು ಬಿಬಿಎಂಪಿ ಅಧಿಕಾರಿಗಳೊಂದಿಗೆ ಕೆರೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೃಷ್ಣ ಬೈರೇಗೌಡ ಮಾತನಾಡಿ, ಸುಮಾರು 6.35 ಎಕರೆ ವಿಸ್ತೀರ್ಣದ ಈ ಕೆರೆಯನ್ನು ಪುನಶ್ಚೇತನಗೊಳಿಸಲು ₹ 2.50 ಕೋಟಿ ಅನುದಾನ ಬಿಡುಗಡೆಯಾಗಿದೆ. ಕೆರೆಯನ್ನು ಸಂರಕ್ಷಿಸುವುದರ ಜೊತೆಗೆ ಹೂಳು ತೆಗೆದು, ಕೆರೆ ಏರಿ ಪುನಶ್ಚೇತನ, ತಂತಿ ಬೇಲಿ ಅಳವಡಿಕೆ ಹಾಗೂ ಒಳಚರಂಡಿ ನೀರಿನ ಹೊರಹರಿವು ತಡೆಯಲು ಪೈಪ್‌ಲೈನ್ ಅಳವಡಿಕೆ ಮಾಡಲಾಗುವುದು ಎಂದು ತಿಳಿಸಿದರು.

ಕೆರೆಯ ಗಡಿರೇಖೆಯನ್ನು ಗುರುತಿಸಲು ಸರ್ವೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಸುತ್ತಲೂ ಗಿಡ-ಮರಗಳನ್ನು ಬೆಳೆಸಲು ಅವಕಾಶ ಕಲ್ಪಿಸಿ, ಮಿನಿ ಅರಣ್ಯೋದ್ಯಾನ ನಿರ್ಮಿಸಲಾಗುವುದು. ಜನರ ಬಳಕೆಯ ಜೊತೆಗೆ ಪ್ರಾಣಿಪಕ್ಷಿಗಳ ಆಶ್ರಯ ತಾಣವಾಗಿಯೂ ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಯೋಜನೆ ರೂಪಿಸಲಾಗಿದ್ದು, ಈ ಎಲ್ಲಾ ಕಾರ್ಯಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.